ಕರಾವಳಿಗೆ ಅಪ್ಪಳಿಸಲಿದೆ ಮೋಚಾ ಚಂಡಮಾರುತ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕಳೆದ ಒಂದೂವರೆ ತಿಂಗಳಿಂದ ಸೂರ್ಯನ ತಾಪಮಾನ ಹೆಚ್ಚಳದಿಂದ ರಾಜ್ಯದ ಜನತೆ ಸೆಕೆಯಲ್ಲಿ ಬೆಂದು ಬಸವಳಿದಿದ್ದಾರೆ. ಹೀಗಾಗಿ ಜನರು ವರುಣನ ಆಗಮನದಿಂದ ಸಂತಸಗೊಂಡಿದ್ದಾರೆ. ವಾತಾವಾರಣದಲ್ಲಿ ಗಾಳಿ ದಿಕ್ಕಿನ ಬದಲಾವಣೆಯಿಂದಾಗಿ ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ (Cyclone Mocha) ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.

ಇನ್ನು ಈ ಸಮಯದಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುವುದರಿಂದ ಮಳೆಯಿಂದ ತೊಂದರೆ ಆಗಬಹುದು ಎನ್ನುವ ಆತಂಕದಲ್ಲಿ ಜನರಿದ್ದಾರೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮೇ 10ರ ವೇಳೆಗೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : ಮಂಗಳೂರು : ಮೇ 3ರಂದು ಕಡಲೂರಿಗೆ ನಮೋ ಮೋದಿ ಭೇಟಿ

ಇದನ್ನೂ ಓದಿ : Krishnamurthy Acharya : ಡಿಕೆಶಿಯ ರಾಜಿ ಸಂಧಾನಕ್ಕೆ ಒಪ್ಪುವರೇ ಕೃಷ್ಣಮೂರ್ತಿ ಆಚಾರ್ಯ ?

ಚಂಡಮಾರುತದ ವೇಗ, ಸಾಗುವ ದಿಕ್ಕು ಮತ್ತು ಪರಿಣಾಮಗಳ ಕುರಿತಾದ ನಿಖರ ಮಾಹಿತಿ ಸ್ಪಷ್ಟವಾಗುತ್ತಿತ್ತು. ಮೇ 6 ವೇಳೆಗೆ ಬಂಗಾಳಕೊಲ್ಲಿಯಲ್ಲಿ ಹಲವು ಬದಲಾವಣೆಗಳಾಗಲಿದ್ದು, ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಚಂಡಮಾರುತದಿಂದ ಮಳೆ ಹೆಚ್ಚಾದಲ್ಲಿ ರಾಜ್ಯದಲ್ಲಿ ಚುನಾವಣೆ ಪ್ರಚಾರ, ಮತದಾನಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮೇ 7 ರ‌‌ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಕಳೆದ ಏಪ್ರಿಲ್‌ ತಿಂಗಳಿಂದ ಸೂರ್ಯನ ತಾಪಮಾನಕ್ಕೆ ರಾಜ್ಯದ ಜನತೆ ಸೆಕೆಯಲ್ಲಿ ಬೆಂದು ಬೆಂಡಾಗಿದ್ದು, ಮಳೆರಾಯನ ಆಗಮನದಿಂದ (Karnataka Weather Report) ಸಂತಸಗೊಂಡಿದ್ದಾರೆ. ವಾತಾವಾರಣದಲ್ಲಿ ಗಾಳಿ ದಿಕ್ಕಿನ ಬದಲಾವಣೆಯಿಂದಾಗಿ ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನ ಭಾರೀ (Karnataka weather Report – Yellow alert) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಕಳೆದ ಎರಡು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವೆಡೆ ಎಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ರಾಜ್ಯಾದ್ಯಂತ ಮಳೆಯ ಆರ್ಭಟ ಶುರುವಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರು, ಕೊಡಗು, ಬೆಂಗಳೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿಯ ಕೆಲವು ಭಾಗಗಳಲ್ಲಿ ಇಂದು ತಾಪಮಾನ ಸ್ವಲ್ಪ ಹೆಚ್ಚಾಗಬಹುದು ಎಂದು ಕೂಡ ಹವಾಮಾನ ಇಲಾಖೆ ತಿಳಿಸಿದೆ.

ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಹೇಳಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಹೆಚ್ಚಿನ ಮಳೆ ನಿರೀಕ್ಷೆ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ರಾಜಧಾನಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಮಂಗಳವಾರ ರಾತ್ರಿ ಕೂಡ ಹಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇಡೀ ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಇದನ್ನೂ ಓದಿ : ಬ್ರಹ್ಮಾವರ: ಮೀನು ಹಿಡಿಯಲು ತೆರಳಿದ್ದ ವೇಳೆ ದುರಂತ, ದೋಣಿ ಮಗುಚಿ ನಾಲ್ವರು ಸಾವು

Cyclone Mocha: Storm Mocha will hit the coast: Meteorological Department forecast

Comments are closed.