ದ.ಕ. ಜಿಲ್ಲಾಧಿಕಾರಿಗಳಿಗೂ ಕೊರೊನಾ ಪಾಸಿಟಿವ್

0

ಮಂಗಳೂರು : ಕರಾವಳಿಯಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿದೆ. ಇಷ್ಟು ದಿನ ಜನಸಾಮಾನ್ಯರನ್ನು ಕಾಡುತ್ತಿದ್ದ ಹೆಮ್ಮಾರಿ ಕೊರೊನಾ ಸೋಂಕು ಇದೀಗ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಅವರಿಗೂ ತಗುಲಿದೆ.

ಕೋವಿಡ್ ಸೋಂಕು ದೃಢಪಟ್ಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತಮ್ಮ ನಿವಾಸದಲ್ಲಿಯೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಜೊತೆಗೆ ಪತ್ನಿ ಹಾಗೂ ಮಗುವಿಗೂ ಪರೀಕ್ಷೆ ನಡೆಸಿದ ಸಂದರ್ಭ ಅವರ ವರದಿಯಲ್ಲೂ ಸೋಂಕು ದೃಢಪಟ್ಟಿದೆ ಹಾಗಾಗಿ ಅವರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ.

ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ|ಕೆ.ವಿ.ರಾಜೇಂದ್ರ ಅವರು ತಮ್ಮ ಗೃಹ ಕಚೇರಿಯಿಂದಲೇ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಈ ವೇಳೆಯಲ್ಲಿ ಜಿಲ್ಲಾಧಿಕಾರಿಗಳು ಯಾವುದೇ ಕರೆಯನ್ನೂ ಸ್ವೀಕಾರ ಮಾಡುತ್ತಿಲ್ಲ, ಬದಲಾಗಿ ವಾಟ್ಸಾಪ್ ಮೂಲಕ ಅಧಿಕಾರಿಗಳಿಗೆ ಸಲಹೆ ಸೂಚನೆಯನ್ನು ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಕೂಡ ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಈ ಹಿಂದೆ ಜಿಲ್ಲಾ ಆರೋಗ್ಯಾಧಿಕಾರಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ರೆ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೂ ಸೋಂಕು ದೃಢಪಟ್ಟಿದೆ. ಇದೀಗ ಜಿಲ್ಲಾಧಿಕಾರಿಗಳು ಕೂಡ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

Leave A Reply

Your email address will not be published.