Dengue Cases : ಉಡುಪಿಯಲ್ಲಿ ಡೆಂಗ್ಯೂ ಆರ್ಭಟ : 10 ದಿನ ಶಾಲೆಗಳಿಗೆ ರಜೆ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಡೆಂಗ್ಯೂ ಆರ್ಭಟ (Dengue Cases) ಜೋರಾಗಿದೆ. ದಿನೇ ದಿನೇ ಡೆಂಗ್ಯೂ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬೈಂದೂರು ತಾಲೂಕಿನ ಜಡ್ಕಲ್‌ ಹಾಗೂ ಮುದೂರು ಗ್ರಾಮದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಅವರು 10 ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 136 ಡೆಂಗ್ಯೂ ಪ್ರಕರಣಗಳು ದಾಖಲಾಗಿದೆ. ಅದ್ರಲ್ಲೂ ಜಡ್ಕಲ್‌ ಹಾಗೂ ಮುದೂರು ಭಾಗದಲ್ಲಿಯೇ ಪ್ರಕರಣಗಳ ಸಂಖ್ಯೆ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಬೈಂದೂರು ಶಾಸಕ ಸುಕುಮಾರ್‌ ಶೆಟ್ಟಿ ಹಾಗೂ ಜಿಲ್ಲಾಧಿಕಾರಿ ಕೂರ್ಮರಾವ್‌ ಅವರು ಚರ್ಚೆ ನಡೆಸಿದ್ದಾರೆ. ನಂತರದಲ್ಲಿ ಮೇ 19 ರಿಂದ ಮೇ 28 ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಕಳೆದ ಹಲವು ದಿನಗಳಿಂದಲೂ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖೆ ಹೆಚ್ಚುತ್ತಿದೆ. ಈ ಕುರಿತು ಆರೋಗ್ಯ ಇಲಾಖೆ ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದೆ. ಡೆಂಗ್ಯೂ ಸೋಂಕಿತ ಲಕ್ಷಣಗಳು ಕಂಡು ಬಂದ್ರೆ ಅಂತವರನ್ನು ತಪಾಸಣೆಗೆ ಒಳಪಡಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಇನ್ನು ಗ್ರಾಮದಲ್ಲಿ ಅಂಬುಲೆನ್ಸ್‌ ವ್ಯವಸ್ಥೆ ಯನ್ನು ಮಾಡಲಾಗಿದ್ದು, ಸೋಂಕು ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳು ಸೂಚನೆಯನ್ನು ನೀಡಿದ್ದಾರೆ.

ಇದನ್ನೂ ಓದಿ : Red Alert : ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ: ಇಂದು ರೆಡ್ ಅಲರ್ಟ್ ಘೋಷಣೆ

ಇದನ್ನೂ ಓದಿ : ಉಡುಪಿಯಲ್ಲಿ ರಜೆ ನಿರ್ಧಾರ ಶಾಲೆ ಆಡಳಿತ ಮಂಡಳಿಗೆ ಎಂದ ಡಿಸಿ : ಬ್ರಹ್ಮಾವರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

dengue Cases Increased 10 day holiday schools in Udupi

Comments are closed.