Dengue fever : ಕುಂದಾಪುರದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ : ಏನಿದರ ಲಕ್ಷಣ

ಕುಂದಾಪುರ : ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ (Dengue fever) ಹೆಚ್ಚುತ್ತಿದೆ. ಕೋವಿಡ್‌ ಸೋಂಕಿನ ಬೆನ್ನಲ್ಲೇ ಡೆಂಗ್ಯೂ ಆರ್ಭಟಿಸುತ್ತಿರುವುದು ಕರಾವಳಿಗರ ಆತಂಕಕ್ಕೆ ಕಾರಣವಾಗಿದೆ. ಅದ್ರಲ್ಲೂ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಜಡ್ಕಲ್‌ ಭಾಗದಲ್ಲಿ ಡೆಂಗ್ಯೂ ಪ್ರಕರಣ ಹಚ್ಚುತ್ತಿದೆ. ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 50ಕ್ಕೂ ಹೆಚ್ಚು ರೋಗಿಗಳು ದಾಖಲಾಗಿದ್ದಾರೆ.

ಜಡ್ಕಲ್ ಗ್ರಾಮದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಗ್ರಾಮದಲ್ಲಿ ವಿಶೇಷ ಆಂಬ್ಯುಲೆನ್ಸ್ ನಿಯೋಜನೆ ಮಾಡಲಾಗಿದೆ. ಕುಂದಾಪುರದ ಸರಕಾರಿ ಆಸ್ಪತ್ರೆಗೆ ಡೆಂಗ್ಯೂ ಪೀಡಿತರೇ ಹೆಚ್ಚಾಗಿ ದಾಖಲಾಗಿರುವ ಹಿನ್ನೆಲೆಯಲ್ಲಿ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಭೇಟಿ ನೀಡಿದರು. ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ವೈದ್ಯರಿಗೆ ಸೂಚಿಸಿದ್ದಾರೆ.

ಡೆಂಗ್ಯೂ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆಳಲ್ಲಿ ಡೆಂಗ್ಯೂ ಪೀಡಿತರಿಗಾಗಿಯೇ ವಿಶೇಷ ವಾರ್ಡ್‌ ತೆರೆಯಲಾಗಿದೆ. ಅಲ್ಲದೇ ನೋಡಲ್‌ ಅಧಿಕಾರಿಯೋರ್ವರನ್ನು ನೇಮಕ ಮಾಡಲಾಗಿದೆ. ಅಲ್ಲದೇ ಉಡುಪಿ ಹಾಗೂ ಮಂಗಳೂರಿನ ವೆನ್ಲಾಕ್‌ ಜಿಲ್ಲಾಸ್ಪತ್ರೆಯಲ್ಲಿ ಜ್ವರಕ್ಕೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆಯಲ್ಲಿಯೂ ಹೆಚ್ಚಳವಾಗುತ್ತಿದೆ.

Dengue fever : ಡೆಂಗ್ಯೂ ರೋಗದ ಲಕ್ಷಣಗಳು, ಮುನ್ನೆಚ್ಚರಿಕೆ, ನಿಯಂತ್ರಣ

ಡೆಂಗ್ಯೂ ಜ್ವರ ವೈರಸ್ ಮೂಲಕ ಹರಡುವ ಜ್ವರವಾಗಿದ್ದು, ಒಬ್ಬರಿಂದ ಇನ್ನೊಬ್ಬರಿಗೆ ಹರಡಲಿದೆ. ಈ ಜ್ವರ ಉಂಟಾದ ವ್ಯಕ್ತಿಗಳಲ್ಲಿ ಮೈ ಕೈ ನೋವು, ಕೀಲು ನೋವು, ಜ್ವರ ಮುಂತಾದ ರೋಗ ಲಕ್ಷಣಗಳು ಕಂಡು ಬರುತ್ತವೆ. ಅಲ್ಲದೇ ವಿಶ್ವದಾದ್ಯಂತ ಲಕ್ಷಾಂತರ ಮಂದಿ ಪ್ರತಿ ವರ್ಷ ಡೆಂಗ್ಯೂ ಜ್ವರದ ಸೋಂಕಿಗೆ ಗುರಿಯಾಗುತ್ತಿದ್ದಾರೆ. ವಿಶೇಷವಾಗಿ ದಕ್ಷಿಣ ಪೂರ್ವ ಏಷ್ಯಾ ಮತ್ತು ಪಾಶ್ಚಿಮಾತ್ಯ ಪೆಸಿಫಿಕ್ ಭೂ ಪ್ರದೇಶಗಳಲ್ಲಿ ಡೆಂಗ್ಯೂ ಜ್ವರ ಅಟ್ಟಹಾಸ ಮರೆಯುತ್ತಿದೆ.

ಡೆಂಗ್ಯೂ ಜ್ವರದ (Dengue fever ) ರೋಗ ಲಕ್ಷಣಗಳು

  • ತಲೆನೋವು
  • ಮೈಕೈ ನೋವು
  • ಕೀಲುನೋವು
  • ವಾಕರಿಕ
  • ವಾಂತ
  • ಕಣ್ಣುಗಳ ಹಿಂಭಾಗದಲ್ಲಿ ನೋವ
  • ಊದಿಕೊಂಡ ಗ್ರಂಥಿಗಳ
  • ದೇಹದ ಮೇಲೆ ಅಲ್ಲಲ್ಲಿ ಕಲೆಗಳು ಕಂಡು ಬರುತ್ತವೆ. ಒಂದೊಮ್ಮೆ ಎಚ್ಚರ ತಪ್ಪಿದ್ರೆ ಪ್ರಾಣಕ್ಕೆ ಕುತ್ತು ತರುತ್ತದೆ.

ಡೆಂಗ್ಯೂ (Dengue fever ) ತಡೆಯುವುದು ಹೇಗೆ ?

  • ಡೆಂಗೆ ತಡೆಗಟ್ಟಲು ಸೊಳ್ಳೆಗಳನ್ನು ನಿಯಂತ್ರಿಸಬೇಕು
  • ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರವಹಿಸಿ
  • ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಉತ್ತಮ
  • ನೀರು ಶೇಖರಣಾ ತೊಟ್ಟಿ, ಟ್ಯಾಂಕ್‌ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಿಡಿ
  • ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬೇಡಿ
  • ಮನೆಯ ಸುತ್ತಲು ಹಾಗೂ ತಾರಸಿಯ ಮೇಲೆ ನೀರು ನಿಲ್ಲದಂತೆ ಎಚ್ಚರವಹಿಸಿ
  • ತೆಂಗಿನ ಚಿಪ್ಪು, ಟಯರ್ ನಂತಹ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ.
  • ತೊಟ್ಟಿ, ಬಿಂದಿಗೆ, ಡ್ರಮ್‌ಗಳಲ್ಲಿ 2-3 ದಿನಕ್ಕೊಮ್ಮೆ ನೀರು ಬದಲಿಸಿ ಸ್ವಚ್ಛಗೊಳಿಸಿ.
  • ಸೀನುವಾಗ, ಕೆಮ್ಮುವಾಗ ಕರವಸ್ತ್ರಗಳನ್ನು ಅಡ್ಡಲಾಗಿ ಇಟ್ಟುಕೊಳ್ಳಿ.
  • ಸೊಳ್ಳೆಗಳನ್ನು ತಡೆಯಲು ಕಿಟಕಿ ಬಾಗಿಲುಗಳಿಗೆ ಮೆಶ್ ಹಾಕಿ ಅಥವಾ ಸೊಳ್ಳೆ ನಾಶಕ ಔಷಧಗಳನ್ನು ಬಳಸಿ.
  • ಹಳ್ಳಿಗಳಲ್ಲಾದರೆ ಸೊಳ್ಳೆಗಳನ್ನು ನಿಯಂತ್ರಿಸಲು ಬೇವಿನ ಸೊಪ್ಪಿನ ಹೊಗೆ ಹಾಕುವುದು ಒಳಿತು.

ಇದನ್ನೂ ಓದಿ : ಕುಂದಾಪುರ : ಪ್ರಥಮ ಪಿಯುಸಿ ಫಲಿತಾಂಶಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

ಇದನ್ನೂ ಓದಿ : ಶಿವರಾಜ್‌ ಕುಮಾರ್‌ ಜೊತೆಗೆ ಮಂಗಳೂರು ಪೊಲೀಸರ ಭರ್ಜರಿ ಡ್ಯಾನ್ಸ್‌

Dengue fever cases increased in Udupi; hospital bed full

Comments are closed.