Dharmasthala: ಅನ್ಯಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು

ಬೆಳ್ತಂಗಡಿ: (Dharmasthala) ಖಾಸಗಿ ಲಾಡ್ಜ್‌ ಗಳಲ್ಲಿ ಐಡಿ ಕಾರ್ಡ್‌ ನೀಡಿ ರೂಂ ಪಡೆಯಲು ಯತ್ನಿಸುತ್ತಿದ್ದ ಅನ್ಯಕೋಮಿನ ಜೋಡಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ನಡೆದಿದೆ. ಯಾವ ಕಾರಣಕ್ಕಾಗಿ ಇಬ್ಬರು ಧರ್ಮಸ್ಥಳಕ್ಕೆ ಬಂದಿರುವುದು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜೋಡಿಯನ್ನು ಚಿತ್ರದುರ್ಗ ಜಿಲ್ಲೆಯ ದಾದಫೀರ್‌ ಮತ್ತು ವಿವಾಹಿತ ಮಹಿಳೆ ಉಮಾ ಎಂಬ ಮಾಹಿತಿ ತಿಳಿದು ಬಂದಿದೆ. ಇವರಿಬ್ಬರು ಖಾಸಗಿ ಲಾಡ್ಜ್‌ ಗಳಲ್ಲಿ ಐಡಿ ಕಾರ್ಡ್‌ ನೀಡಿ ರೂಂ ಪಡೆಯಲು ಯತ್ನಿಸುತ್ತಿದ್ದರು. ಆದರೆ ಅನುಮಾನ ಬಂದ ಲಾಡ್ಜ್‌ ಮಾಲೀಕರು ಕೂಡ ಅನ್ಯಕೋಮಿನ ಜೋಡಿಯಾದ ಕಾರಣದಿಂದ ರೂಂ ನೀಡದೇ ಸುಮ್ಮನಿದ್ದು, ಅವರನ್ನು ಹಿಂದಕ್ಕೆ ಕಳುಹಿಸಿದ್ದಾರೆ. ನಂತರ ಹಿಂದೂ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ.

ಇದರ ಬಗ್ಗೆ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಇಬ್ಬರನ್ನು ಹಿಡಿದು ವಿಚಾರಿಸಿ ಧರ್ಮಸ್ಥಳ ಪೊಲೀಸ್‌ ಠಾಣೆಗೆ ಒಪ್ಪಿಸಿದ್ದಾರೆ. ಅನ್ಯಕೋಮಿನ ಜೋಡಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಅವರ ಪೋಷಕರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಇದಲ್ಲದೇ ಈ ಜೋಡಿಗಳು ಯಾವ ಕಾರಣಕ್ಕಾಗಿ ಧರ್ಮಸ್ಥಳಕ್ಕೆ ಬಂದಿದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಅನ್ಯಕೋಮಿನ ವಿಚಾರದ ಮಾಹಿತಿ ತಿಳಿದು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಹಿಂದೂ ಕಾರ್ಯಕರ್ತರು ಜಮಾಯಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : Warrior heart attack death: ತಾಯಿಯ ವರ್ಷದ ಕಾರ್ಯಕ್ಕೆ ಹುಟ್ಟೂರಿಗೆ ಬರುತ್ತಿದ್ದ ಯೋಧ ಹೃದಯಾಘಾತದಿಂದ ಸಾವು

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಅಪಘಾತ: 15 ಕ್ಕೂ ಹೆಚ್ಚು ಮಂದಿಗೆ ಗಾಯ

ಚಾಮರಾಜನಗರ: ಗುಜರಾತ್‌ ನಿಂದ ಬಂದಿದ್ದ ಪ್ರವಾಸಿಗರ ಬಸ್ಸೊಂದು ಮಹದೇಶ್ವರ ಬೆಟ್ಟದ ಬಳಿಯಲ್ಲಿ ಪಲ್ಟಿಯಾಗಿ 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.

ಗುಜರಾತ್‌ ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಸ್ಲೀಪರ್‌ ಕೋಚ್‌ ಮೂಲಕ ಪ್ರವಾಸಿಗರು ಬಂದಿದ್ದು, ಪಾಲಾರ್‌ ನ ಎರಡನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಸ್‌ ಹಿಂದಕ್ಕೆ ಜಾರಿ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಬಸ್‌ ನಲ್ಲಿದ್ದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದು, 15 ಕ್ಕೂ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : Cement container accident: ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಮೆಂಟ್‌ ಕಂಟೈನರ್‌ ಪಲ್ಟಿ: ಕಾರು ಜಖಂ

ಇದನ್ನೂ ಓದಿ : ಆನ್‌ಲೈನ್‌ ಕೆಲಸ ನೀಡುವುದಾಗಿ ಬ್ರಹ್ಮಾವರದ ಯುವಕನಿಗೆ ಗೂಗಲ್ ಪೇ ಮೂಲಕ 1.40 ಲಕ್ಷ ರೂ. ವಂಚನೆ

Dharmasthala: Hindu activists hand over a foreign couple to the police

Comments are closed.