ಸುರತ್ಕಲ್ ನಲ್ಲಿ ನಾಯಿಯನ್ನು ಬೈಕಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಚಿತ್ರ ಹಿಂಸೆ ಕೊಟ್ಟ ಪಾಪಿಗಳು : ವೀಡಿಯೋ ವೈರಲ್

ಸುರತ್ಕಲ್ : ನಾಯಿಯೊಂದರ ಎರಡೂ ಕಾಲುಗಳನ್ನು ಹಗ್ಗದ ಮೂಲಕ ಬೈಕಿಗೆ ಕಟ್ಟಿ, ರಸ್ತೆಯಲ್ಲಿ ಎಳೆದೊಯ್ದು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ನಡೆದಿದೆ.

ಮಂಗಳೂರು ಹೊರವಲಯದ ಸುರತ್ಕಲ್ ನ ಎನ್ ಐಟಿಕೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ಸವಾರರು ನಾಯಿಯನ್ನು ಬೈಕಿಗೆ ಕಟ್ಟಿಕೊಂಡು ಎಳೆದೊಯ್ಯುತ್ತಿರುವ ವೀಡಿಯೋವನ್ನು ಸಾರ್ವಜನಿಕರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಘಟನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆಯೇ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಸಾಮಾಜಿ ಜಾಲತಾಣದಲ್ಲಿ ವೀಡಿಯೊ ವೈರಲ್ ಆಗುತ್ತಿದ್ದಂತೆಯೇ ಸುರತ್ಕಲ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಂಕಿತ ಆರೋಪಿ ಯನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Comments are closed.