ಸಾಲಿಗ್ರಾಮ : ಮಾದಕವಸ್ತು ಸೇವನೆ, ಮೂವರ ಬಂಧನ

ಕೋಟ :(Drug consumption 3 Arrested) ಮಾದಕ ವಸ್ತು ಸೇವನೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಉಡುಪಿ (Udupi) ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದಲ್ಲಿ(saligrama) ಮೂವರನ್ನು ಸೆನ್‌ ಅಪರಾಧ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಮಾಧಕವಸ್ತು ಸೇವನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ್‌ ಉಪಾಧ್ಯಾಯ, ಆದಂ, ತಬ್ರೇಜ್‌ ಎಂಬವರನ್ನು ಬಂಧಿಸಲಾಗಿದೆ. ಮೂವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮೂವರು ಕೂಡ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಮೂವರನ್ನು ಕೂಡ ಸೆಪ್ಟೆಂಬರ್‌ 9 ರಂದು ಬಂಧಿಸಲಾಗಿತ್ತು.

ಈ ಕುರಿತು ಉಡುಪಿಯ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಮೂವರ ವಿರುದ್ದ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಮಾದಕವಸ್ತು ಮಾರಾಟ ಜಾಲ ಸಕ್ರೀಯವಾಗಿದೆ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಸೆನ್‌ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಇನ್ನು ಬೈಂದೂರಿನ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಅಡಿಯಲ್ಲಿ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಮಹಮ್ಮದ್‌ ಶರೀಫ್‌ ಎಂಬಾತ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇವನೆ ಮಾಡುತ್ತಿದ್ದ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆಯಲ್ಲಿ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈತನ ವಿರುದ್ದ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ ವಿಸರ್ಜನೆಯ ವೇಳೆ ವಿದ್ಯಾರ್ಥಿಯ ಬರ್ಬರ ಹತ್ಯೆ

ಬೆಳಗಾವಿ : ಗಣೇಶಮೂರ್ತಿ ವಿಸರ್ಜನೆಯ ಮೆರವಣಿಗೆ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ಆರಂಭವಾದ ಜಗಳ ವಿದ್ಯಾರ್ಥಿ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಳಗಾವಿ ಜಿಲ್ಲೆಯ ಯರಹಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅರ್ಜುನ್‌ ಗೌಡ ಪಾಟೀಲ (20 ವರ್ಷ) ಎಂಬಾತನೇ ಕೊಲೆಯಾಗಿರುವ ವಿದ್ಯಾರ್ಥಿಯಾಗಿದ್ದಾನೆ. ಇನ್ನು ವಿದ್ಯಾರ್ಥಿಗಳಾದ ಉದಯ ಭಂಡ್ರೊಲ್ಲಿ ( 21 ವರ್ಷ), ಸುಭಾಷ ಸೋಲಣ್ಣವರ (21 ವರ್ಷ), ವಿಠಲ ಮೀಶಿ ( 20 ವರ್ಷ) ಹಾಗೂ ಮತ್ತೋರ್ವ ಬಾಲಾಪರಾಧಿಕಯನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದಲ್ಲಿ ಈ ಬಾರಿ ಅದ್ದೂರಿಯಾಗಿ ಗಣೇಶೋತ್ಸವವನ್ನು ಆಚರಿಸಲಾಗಿತ್ತು. 11 ದಿನಗಳ ಆಚರಣೆಯ ಬಳಿಕ ಶನಿವಾರ ವಿಸರ್ಜನಾ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಈ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆರಂಭಗೊಂಡಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಅರ್ಜುನ್‌ ಗೌಡ ಪಾಟೀಲ್‌ಗೆ ಯುವಕರ ತಂಡ ಚಾಕುವಿನಿಂದ ಇರಿದಿದೆ. ಘಟನೆಯಲ್ಲಿ ಅರ್ಜುನ್‌ ಗೌಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಅರ್ಜುನ್‌ ಗೌಡ ಸಾವನ್ನಪ್ಪಿದ್ದಾನೆ.

ಇನ್ನು ಘಟನೆಯ ಬೆನ್ನಲ್ಲೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ಮಾಹಿತಿ ಪಡೆದ ಪೊಲೀಸರು ಬಾಲ ಆರೋಪಿ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಎಲ್ಲರೂ ಕೂಡ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ವೈಯಕ್ತಿಕ ದ್ವೇಷದ ಕಾರಣಕ್ಕೆ ಈ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ. ಈ ಕುರಿತು ಯರಹಟ್ಟಿ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : Kolkata ED Raid: ED ದಾಳಿಯಲ್ಲಿ ಹಣದ ರಾಶಿ ಪತ್ತೆ

ಇದನ್ನೂ ಓದಿ : hundreds of wells :ಉಡುಪಿಯಲ್ಲಿದೆ ನೂರು ಬಾವಿಗಳ ಹಾಡಿ, ಕಾಲಿಟ್ಟಲ್ಲೆಲ್ಲಾ ಕಾಣಸಿಗುತ್ತದೆ ಬರೇ ಬಾವಿಗಳು

Drug consumption 3 Arrested in saligrama Udupi

Comments are closed.