Drug sales case: ಮಣಿಪಾಲ: ಮಾದಕ ವಸ್ತು ಮಾರಾಟ: ಇಬ್ಬರು ವಿದ್ಯಾರ್ಥಿಗಳ ಅಮಾನತು

ಉಡುಪಿ: (Drug sales case) ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಆರೋಪಿಗಳಾದ ಇಬ್ಬರು ವಿದ್ಯಾರ್ಥಿಗಳನ್ನು ಅಮಾನತು ಮಾಡುವ ಮೂಲಕ ಮಣಿಪಾಲ ಮಾಹೆ ವಿದ್ಯಾಲಯವೂ ಅಕ್ರಮದಲ್ಲಿ ತೊಡಗಿರುವ ವಿರುದ್ದ ಶಿಸ್ತು ಕ್ರಮ ಜರುಗಿಸಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಅಕ್ಷಯ್‌ ಹಾಕೇ ಮಚ್ಚೀಂದ್ರ ತಿಳಿಸಿದ್ದಾರೆ.

ಮಾದಕ ವಸ್ತು ಸೇವನೆ, ಮಾರಾಟ ಹಾಗೂ ಸಾಗಾಟಕ್ಕೆ ಸಂಬಂಧಿಸಿ ಉಡುಪಿ ಜಿಲ್ಲೆಯಾದ್ಯಂತ ಪೊಲೀಸರು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಇದನ್ನು ನಿಯಂತ್ರಿಸಲು ಬೇಕಾದ ಎಲ್ಲ ಕ್ರಮಗಳನ್ನು ತೆಗೆದು ಕೊಳ್ಳುತ್ತಿದೆ. ಇದೀಗ ವಿದ್ಯಾರ್ಥಿಗಳು ಸೇವನೆ ಮಾತ್ರವಲ್ಲದೇ ಮಾದಕ ವಸ್ತುಗಳ ಮಾರಾಟದಲ್ಲೂ ತೊಡಗಿಸಿಕೊಂಡಿರುವ ವಿಚಾರ ತನಿಖೆಯಿಂದ ತಿಳಿದುಬಂದಿದೆ ಎಂದರು.

ಈ ರೀತಿಯ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಕಾಲೇಜಿನ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದ್ದೇವೆ. ಪೊಲೀಸ್‌ ಇಲಾಖೆಯಿಂದ ಕಾನೂನು ಕ್ರಮ ತೆಗೆದುಕೊಳ್ಳುವುದರ ಜೊತೆಗೆ ಆಡಳಿತ ಮಂಡಳಿಯೂ ಕೈಜೋಡಿಸಿದರೆ ವಿದ್ಯಾರ್ತಿಗಳಿಗೆ ಸ್ಪಷ್ಟ ಸಂದೇಶ ನೀಡಲು ಸಾಧ್ಯವಾಗುತ್ತದೆ. ಇದಕ್ಕೆ ಮಾಹೆ ಆಡಳಿತ ಮಂಡಳಿ ಸಕಾರಾತ್ಮವಾಗಿ ಸ್ಪಂದಿಸಿದೆ ಎಂದು ಅವರು ಹೇಳಿದರು.

ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಡಿಸೆಂಬರ್‌ ಹಾಗೂ ಜನವರಿ ತಿಂಗಳಲ್ಲಿ ಮಾಹೆಯ ಇಬ್ಬರು ವಿದ್ಯಾರ್ಥಿಗಳಾದ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದ ಯುವಕರನ್ನು ಬಂಧಿಸಲಾಗಿತ್ತು. ಈ ಬಗ್ಗೆ ಮಣಿಪಾಲ ಹಾಗೂ ಉಡುಪಿ ಸೆನ್‌ ಅಪರಾದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇವರು ನ್ಯಾಯಂಗ ಬಂಧನದ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ ಎಂದು ಎಸ್‌ ಪಿ ತಿಳಿಸಿದರು.

ಈ ಇಬ್ಬರು ವಿದ್ಯಾರ್ಥಿಗಳ ಪಟ್ಟಿಯನ್ನು ನಾವು ಮಾಹೆ ಆಡಳಿತ ಮಂಡಳಿಗೆ ನೀಡಿದ್ದೇವು, ಅದರಂತೆ ಮಾಹೆಯವರು ಇಬ್ಬರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ಆಂತರಿಕ ಶಿಸ್ತು ಕ್ರಮ ತೆಗೆದುಕೊಳ್ಳುವ ಮೂಲಕ ತಮ್ಮ ನಿಲುವನ್ನು ಸ್ಪಷ್ಟಪಡಿಸಿದೆ. ನಮಗೆ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವ ಉದ್ದೇಶವಿಲ್ಲ, ಬದಲಾಗಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳ್ಲಲಿ ತೊಡಗಿಸಿಕೊಂಡವರ ನೆರವಿಗೆ ಯಾರು ಬರುವುದಿಲ್ಲ ಎಂಬ ಸಂದೇಶ ವಿದ್ಯಾರ್ಥಿಸಮುದಾಯಕ್ಕೆ ಹೋಗಬೇಕಾಗಿದೆ ಎಂದರು.

ಇದನ್ನೂ ಓದಿ : Black Hawk Helicopter Crash: ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ಪತನ: 2 ಸಿಬ್ಬಂದಿ ಸಾವು

ನಮ್ಮ ಮನವಿಗೆ ಮಾಹೆಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅದೇ ರೀತಿ ಜಿಲ್ಲೆಯ ಇತರ ಶಿಕ್ಷಣ ಸಂಸ್ಥೆಗಳು ಕೂಡ ಮಾದಕ ವಸ್ತು ಮಾರಾಟದಲ್ಲಿ ತೊಡಗುವ ವಿದ್ಯಾರ್ಥಿಗಳ ವಿರುದ್ದ ಶಿಸ್ತು ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು. ಈ ಮೂಲಕ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಈ ಚಟಕ್ಕೆ ಬೀಳದಂತೆ ತಡೆಯುವ ಪ್ರಯತ್ನ ಮಾಡಬಹುದಾಗಿದೆ ಎಂದು ಎಸ್‌ ಪಿ ಅಕ್ಷಯ್‌ ಹಾಕೇ ಮಚ್ಚೀಂದ್ರ ಹೇಳಿದರು.

Drug sales case: Manipal: Drug sales: Suspension of two students

Comments are closed.