ಡ್ರಗ್ಸ್ ಮಾಫಿಯಾದ ವಿರುದ್ದ ತೊಡೆತಟ್ಟಿದ ಎಬಿವಿಪಿ : ನಶಾ ಮುಕ್ತ ಭಾರತಕ್ಕಾಗಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ

0

ಬಂಟ್ವಾಳ : ದೇಶದಾದ್ಯಂತ ಡ್ರಗ್ಸ್ ಮಾಫಿಯಾ ಹೆಚ್ಚುತ್ತಿದೆ. ಯುವ ಜನಾಂಗವನ್ನು ಡ್ರಗ್ಸ್ ಹೆಸರಲ್ಲಿ ಹಾದಿ ತಪ್ಪಿಸಲಾಗುತ್ತಿದೆ. ಇಂತಹ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದವರ ವಿರುದ್ದ ದೇಶದ್ರೋಹದ ಕೇಸ್ ದಾಖಲಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ನಶಾ ಮುಕ್ತ ಭಾರತಕ್ಕಾಗಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ ನಡೆಯಿತು.

ಬಂಟ್ವಾಳದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮಕ್ಕೆ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹಾಗೂ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ರಶ್ಮಿ ಎಸ್ .ಆರ್ ಸಹಿ ಹಾಕುವುದರ ಮೂಲಕ ಚಾಲನೆ ನೀಡಿದರು.

ಡ್ರಗ್ಸ್ ಮಾಫಿಯಾದ ವಿರುದ್ದ ಯುವ ಜನರಲ್ಲಿ ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಎಬಿವಿಪಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಸಹಿ ಸಂಗ್ರಹ ಮಾಡುವುದರ ವಿರುದ್ದ ಎಬಿವಿಪಿ ಡ್ರಗ್ಸ್ ಮಾಫಿಯಾವನ್ನು ದೇಶದಿಂದ ಕಿತ್ತು ಹಾಕಲ ಪಣತೊಟ್ಟಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಕರಿಂದ ಸಂಕಲ್ಪ ಅಭಿಯಾನದಲ್ಲಿ ಸಹಿ ಸಂಗ್ರಹಿಸುವ ಕಾರ್ಯವನ್ನು ಮಾಡಲಾಯಿತು.

ಜಿ.ಪಂ.ಸದ್ಯಸ ರವೀಂದ್ರ ಕಂಬಳಿ ಸೇರಿದಂತೆ ಹಲವರು ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಅ.ಭಾ.ವಿ.ಪ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್ ಕೋರಿ, ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು ,ಹರ್ಷಿತ್ ಕೊಯಿಲ ಅಖಿಲಾಷ್, ದಿನೇಶ್ ಕೊಯಿಲ, ನಿಶ್ಚಿತ್ ಬಂಟ್ವಾಳ್.

ಹಿರಿಯ ಕಾರ್ಯಕರ್ತರಾದ ಪ್ರಣಮ್ ರಾಜ್ ಅಜ್ಜಿಬೆಟ್ಟು,ಮನೀಷ್ ರಾಯಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು

Leave A Reply

Your email address will not be published.