ಉಡುಪಿ : ಕರಾವಳಿಯಲ್ಲಿ ಡ್ರಗ್ಸ್ ಮಾಫಿಯಾದ ತನಿಖೆ ಚುರುಕುಗೊಂಡಿದೆ. ಇನ್ನೊಂದೆಡೆ ಡ್ರಗ್ಸ್ ದಂಧೆಯನ್ನು ಪೊಲೀಸರು ಬಯಲು ಮಾಡುತ್ತಿದ್ದಾರೆ. ಇದೀಗ ಮಣಿಪಾಲದಲ್ಲಿ ಡ್ರಗ್ಸ್ ಜಾಲವೊಂದನ್ನು ಬೇಧಿಸಿರುವ ಪೊಲೀಸರು ಬರೋಬ್ಬರಿ 10 ಲಕ್ಷ ಮೌಲ್ಯದ ಡ್ರಗ್ಸ್ ನ್ನು ವಶಪಡಿಸಿಕೊಂಡಿದ್ದಾರೆ.

ಡ್ರಗ್ಸ್ ದಂಧೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಅಪಾರ ಪ್ರಮಾಣದಲ್ಲಿ ಮಾಧಕ ವಸ್ತುಗಳನ್ನು ಪೊಲೀಸರು ವಶ ಪಡಿಸಿಕೊಳ್ಳುತ್ತಿದ್ದಾರೆ. ಇದೀಗ ಮಣಿಪಾಲದಲ್ಲಿ ಆಂತರಿಕ ಭದ್ರತಾ ವಿಭಾಗದ ಮಾಹಿತಿಯ ಮೇರೆಗೆ ಕಾರ್ಯಾಚರಣೆಯನ್ನು ನಡೆಸಿ, ಯುವಾಂಶು ಜೋಶಿ ( 20 ವರ್ಷ ) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಉತ್ತರ ಭಾರತ ಮೂಲದವನೆಂದು ತಿಳಿದುಬಂದಿದೆ. ಬಂಧಿತನಿಂದ 10 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ವಶ ಪಡಿಸಿಕೊಳ್ಳಲಾಗಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಇನ್ನೂ ಹಲವರಿಗಾಗಿ ಗಾಳಬೀಸಿದ್ದಾರೆ.ಯುವಾಂಶು ಜೋಶಿ ಯಾರೊಂದಿಗೆ ಸಂಪರ್ಕ ಹೊಂದಿದ್ದಾನೆ ಅನ್ನೋ ಬಗ್ಗೆಯೂ ಪೊಲೀಸರು ವಿಚಾರಣೆ ಯನ್ನು ನಡೆಸುತ್ತಿದ್ದಾರೆ.