ಅಝಾನ್ ಬಗ್ಗೆ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಮಂಗಳೂರು: (Eshwarappa’s controversial statement) ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಕೆ. ಎಸ್.‌ ಈಶ್ವರಪ್ಪ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಮಸೀದಿಗಳಲ್ಲಿ ಕೂಗುವ ಅಝಾನ್ ಬಗ್ಗೆ ಮಾತನಾಡಿದ್ದು, ಮೈಕ್‌ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಎಂದಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಕೆ.ಎಸ್‌. ಈಶ್ವರಪ್ಪ ಭಾಷಣ ಮಾಡುತ್ತಿದ್ದಾಗ ಸ್ಥಳೀಯ ಮಸೀದಿಯಿಂದ ಅಝಾನ್ ಶಬ್ಧ ಕೇಳಿ ಬಂದಿದ್ದು, ಇದರಿಂದ ಆಕ್ರೋಶಗೊಂಡ ಈಶ್ವರಪ್ಪನವರು ಈ ರೀತಿಯ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ವಿಧಾನಸಭೆ ಚುನಾವಣೆಗಳು ಹತ್ತಿರ ಬರುತ್ತಿದ್ದು, ಎಲ್ಲಡೆ ಸಮಾವೇಶಗಳು, ಸಭೆಗಳು, ರ್ಯಾಲಿಗಳು ನಡೆಯುತ್ತಿವೆ. ರಾಜಕಾರಣಿಗಳು ಭಾಷಣ ಮಾಡುವ ಭರದಲ್ಲಿ ಹಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ನಂತರ ಪಜೀತಿಗೆ ಒಳಗಾಗುತ್ತಾರೆ. ಈ ಹಿಂದೆ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ ಕೂಡ ಭಾಷಣ ಮಾಡುತ್ತಿದ್ದಾಗ ವಿವಾದಾತ್ಮಕ ಹೇಳಿ ನೀಡಿದ್ದು, ಎಲ್ಲೆಡೆ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಉಡುಪಿ ಕೃಷ್ಣ ಮಠಕ್ಕೆ ಜಾಗ ನೀಡಿದ್ದು ಮುಸಲ್ಮಾನರ ರಾಜರು ಎಂಬ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಕರಾವಳಿ ಭಾಗದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇದೀಗ ಈಶ್ವರಪ್ಪ ಕೂಡ ಭಾಷಣ ಮಾಡುವಾಗ ವಿವಾದಾತ್ಮಕ ಹೇಳಿಕೆ (Eshwarappa’s controversial statement) ನೀಡಿದ್ದು, ನಾನು ಎಲ್ಲಿ ಹೋದರು ಇದೊಂದು ತಲೆನೋವು. ಮೈಕ್‌ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳಿಸೋದಾ? ಮೈಕ್‌ ಹಿಡಿದುಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಅನ್ನುತ್ತೇವೆ. ಸುಪ್ರೀಕೋರ್ಟ್‌ ಆದೇಶವಿದ್ದು, ಇಂದಲ್ಲ ನಾಳೆ ಈ ಸಮಸ್ಯೆ ಇತ್ಯರ್ಥವಾಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ ಶ್ಲೋಕ, ಭಜನೆಗಳ ಮೂಲಕ ದೇವರನ್ನು ಪ್ರಾರ್ಥಿಸುತ್ತೇವೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ಮೋದಿ ಅವರು ಹೇಳುತ್ತಾರೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂತಹ ದೇಶವಿದ್ದರೆ ಅದು ಭಾರತ ಮಾತ್ರ ಎಂದಿದ್ದಾರೆ.

ಇದನ್ನೂ ಓದಿ : ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

ಇದನ್ನೂ ಓದಿ : ರಕ್ಷಿತ್ ಶೆಟ್ಟಿ ತುಳುನಾಡಿದ ಹೆಮ್ಮೆ, ಅವರನ್ನು ಟಾರ್ಗೆಟ್ ಮಾಡಬೇಡಿ : ಮಿಥುನ್ ರೈ

ಆಜಾನ್​​ನಿಂದ ಮಕ್ಕಳ ಪರೀಕ್ಷೆ ಮೇಲೆ ಎಫೆಕ್ಟ್ ಆಗುತ್ತದೆ -ಈಶ್ವರಪ್ಪ ಸ್ಪಷ್ಟನೆ
ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಎಂದು ಆಜಾನ್‌ ಬಗ್ಗೆ ಕೆ.ಎಸ್​.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ‌ (Eshwarappa’s controversial statement)ನೀಡಿದ್ದರು. ಈ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ನಾನು ಧಾರ್ಮಿಕ ನಿಂದನೆ ಮಾಡಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ನಾನು ಧಾರ್ಮಿಕ ನಿಂದನೆ ಮಾಡಿಲ್ಲ. ಆದ್ರೆ ಆಜಾನ್​​ನಿಂದ ಮಕ್ಕಳ ಪರೀಕ್ಷೆ ಮೇಲೆ ಎಫೆಕ್ಟ್ ಆಗುತ್ತದೆ ಎಂದು ಮಂಗಳೂರು ನಗರದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ : R. Dhruvanarayana: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ನಿಧನ

Eshwarappa’s controversial statement: KS Eshwarappa’s controversial statement about Azan

Comments are closed.