ವಿಟ್ಲ : ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ಗ್ಯಾರೇಜ್ ಹೊತ್ತಿ ಉರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ – ಪುತ್ತೂರು ರಸ್ತೆಯಲ್ಲಿರುವ ಚಂದಳಿಕೆ ಎಂಬಲ್ಲಿ ನಡೆದಿದೆ.
ಇಂದು ಬೆಳಗಿನ ವೇಳೆಯಲ್ಲಿ ಈ ಘಟನೆ ಸಂಬಂಧಿಸಿದ್ದು, ಗ್ಯಾರೇಜ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳೀಯರು ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಗ್ಯಾರೇಜ್ ನೊಳಗೆ ಸಿಲಿಂಡರ್ ಇದ್ದು, ಸ್ಪೋಟಗೊಳ್ಳುವ ಆತಂಕ ನಿರ್ಮಾಣವಾಗಿದೆ.
ಅಗ್ನಿ ಅವಘಡದಿಂದಾಗಿ ಲಕ್ಷಾಂತರ ಮೌಲ್ಯದ ಸೊತ್ತುಗಳು ನಾಶವಾಗಿದೆ. ಬೆಂಕಿ ತಹಬದಿಗೆ ಬಂದ ನಂತರವಷ್ಟೆ ನಷ್ಟದ ಪ್ರಮಾಣ ತಿಳಿದು ಬರಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಲೇ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಆದರೆ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.