ಉಡುಪಿ : ಕೊರೊನಾ ವೈರಸ್ ಸೋಂಕಿನ ಆರ್ಭಟದಿಂದಾಗಿ ಹಿನ್ನೆಲೆಯಲ್ಲಿ ಆರ್ಥಿಕ ಮುಂಗಟ್ಟಿಗೆ ಎದುರಾಗಿದ್ದು, ಸಾಲ ಬಾಧೆಯಿಂದ ಮನನೊಂದು ಮೀನುಗಾರರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ.

ಕೃಷ್ಣ ಕಾಂಚನ್ (42 ವರ್ಷ) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವ ಮೀನುಗಾರ. ಕಳೆದ 20 ವರ್ಷಗಳಿಂದಲೂ ಮೀನುಗಾರಿಕಾ ವೃತ್ತಿಯನ್ನು ಮಾಡಿಕೊಂಡಿದ್ದರು. ಆದರೆ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮೀನುಗಾರಿಕೆ ಬಂದ್ ಆಗಿದ್ದು, ಸಾಲ ಮರುಪಾವತಿ ಮಾಡಲಾಗದೆ ತನ್ನ ಹಳೆಯ ಮನೆಯಲ್ಲಿಯೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷ್ಣ ಕಾಂಚನ್ ಆತ್ಮಹತ್ಯೆಗೆ ಆರ್ಥಿಕ ಮುಗ್ಗಟ್ಟು ಕಾರಣವೆಂದು ಅವರ ಸಹೋದರ ನವೀನ್ ಎಂಬವರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಮಲ್ಪೆ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.