Fishing boat capsize : ಭಟ್ಕಳ, ಮಂಗಳೂರಿನಲ್ಲಿ ಮೀನುಗಾರಿಕಾ ದೋಣಿ ಪಲ್ಟಿ: ಓರ್ವ ನಾಪತ್ತೆ

ಕಾರವಾರ/ಮಂಗಳೂರು : Fishing boat capsize : ಒಂದು ಕಡೆಯಿಂದ ರಾಜ್ಯದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಸಾಕಷ್ಟು ಪ್ರಮಾಣದಲ್ಲಿ ಹಾನಿಯು ಸಂಭವಿಸಿದೆ. ಈ ನಡುವೆ ಕರಾವಳಿಯಲ್ಲಿ ಸಮುದ್ರವೂ ಅಬ್ಬರಿಸುತ್ತಿದೆ. ರಕ್ಕಸ ಗಾತ್ರದ ಅಲೆಗಳು ಸಮುದ್ರದ ದಡಕ್ಕೆ ಬಂದು ಅಪ್ಪಳಿಸುತ್ತಿದ್ದು ಮೀನುಗಾರರಿಗೆ ಮೀನುಗಾರಿಕೆ ನಡೆಸುವುದು ಕಷ್ಟಕರವಾಗಿದೆ. ದಕ್ಷಿಣಕನ್ನಡ (Mangalore) ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ‌ ಸಮುದ್ರದ ಅಲೆಯ ಅಬ್ಬರಕ್ಕೆ ಮೀನುಗಾರಿಕೆ ನಡೆಸುತ್ತಿದ್ದ ದೋಣಿಗಳೆರಡು ಪಲ್ಟಿಯಾಗಿದೆ.

ಉತ್ತರಕನ್ನಡ ‌ಜಿಲ್ಲೆಯ ಭಟ್ಕಳದ ಜಾಲಿ‌ ಸಮೀಪದ ಸಮುದ್ರದಲ್ಲಿ ಈ ಅವಘಡ ಸಂಭವಿಸಿದೆ‌. ನಾಗರಾಜ‌ ಮೊಗೇರ, ಪುರುಷೋತ್ತಮ ಮೊಗೇರ, ವಿಕ್ಟರ್ ರಾಜ ಎಂಬವರು ದೋಣಿಯೊಂದರಲ್ಲಿ ನಿನ್ನೆ ರಾತ್ರಿ ಮೀನುಗಾರಿಕೆಗೆ ತೆರಳಿದ್ದರು. ಆದ್ರೆ ಮೀನುಗಾರಿಕೆ ಮುಗಿಸಿ ವಾಪಾಸಾಗುತ್ತಿದ್ದಂತೆ ಅಲೆಗಳ ಹೊಡೆತಕ್ಕೆ ದೋಣಿ ಮುಳುಗಡೆಯಾಗಿದೆ. ಈ ಪುರುಷೋತ್ತಮ ‌ಮೊಗೇರ ಮತ್ತು ವಿಕ್ಟರ್ ರಾಜ ಎಂಬವರು ಬಚವಾಗಿದ್ದಾರೆ. ಆದ್ರೆ ಘಟನೆಯಲ್ಲಿ ನಾಗರಾಜ ಮೊಗೇರ ನಾಪತ್ತೆಯಾಗಿದ್ದಾರೆ. ಹೀಗಾಗಿ‌ ನಾಪತ್ತೆಯಾದ ಮೀನುಗಾರನಿಗಾಗಿ ಸ್ಥಳೀಯ ಮೀನುಗಾರರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇನ್ನು ಮಂಗಳೂರಿನ ಪಣಂಬೂರು ಕಡಲ ಭಾಗದಲ್ಲಿ ಮೀನುಗಾರಿಕಾ ದೋಣಿ ಪಲ್ಟಿಯಾಗಿದೆ‌. ಗಾಳಿ ಅಲೆಗಳ‌ ಅಬ್ಬರಕ್ಕೆ ದೋಣಿ ಪಲ್ಟಿಯಾಗಿದೆ. ಈ‌ ದೋಣಿಯಲ್ಲಿ ಇಬ್ಬರು ಮೀನುಗಾರರಿದ್ದು ಸ್ಥಳೀಯರು ಇಬ್ಬರನ್ನು ಸಹ ರಕ್ಷಣೆ ಮಾಡಿದ್ದಾರೆ. ಯತೀಶ್ ಸಾಲ್ಯಾನ್ ಎಂಬವರಿಗೆ ಸೇರಿದ ದೋಣಿ ಇದಾಗಿದ್ದು ಸ್ಥಳೀಯ ಮೀನುಗಾರರು ಸುರಕ್ಷಿತವಾಗಿ ದೋಣಿಯನ್ನು‌ ಮೇಲಕೆತ್ತಿದ್ದಾರೆ.

ಈ ಬಾರಿಯ ಆಳಸಮುದ್ರ ಮೀನುಗಾರಿಕೆ ಈಗಷ್ಟೇ ಆರಂಭವಾಗಿದೆ. ‌ಈ ನಡುವೆ ನಾಡದೋಣಿ ಮೀನುಗಾರರು ಸಹ‌ ಮೀನುಗಾರಿಕೆ ನಡೆಸುತ್ತಿದ್ದಾರೆ. ಆದ್ರೆ ಕಡಲು ಪ್ರಕ್ಷುಬ್ಧಗೊಂಡಾಗ ನಾಡದೋಣಿ ಮೀನುಗಾರರಿಗೆ ಮೀನುಗಾರಿಕೆ ನಡೆಸುವುದು ಕಷ್ಟ ಸಾಧ್ಯವಾಗುತ್ತದೆ. ಹೀಗಾಗಿ ಬಹಳ‌ ಎಚ್ಚರಿಕೆಯಿಂದ ಮೀನುಗಾರಿಕೆ ನಡೆಸಬೇಕಾಗಿದೆ.

ಕರ್ನಾಟಕದಲ್ಲಿ ಮಳೆ ಅಬ್ಬರ : ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ನಿರಂತರವಾಗಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಬೆಂಗಳೂರಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನಿನ್ನೆಯಿಂದಲೂ ಬೆಂಗಳೂರಲ್ಲಿ ಮಳೆ ಸುರಿಯುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಶಾಲೆ, ಕಾಲೇಜುಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಅವರು ರಜೆ ಘೋಷಣೆ ಮಾಡಿದ್ದಾರೆ. ನಿನ್ನೆಯಿಂದಲೂ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಿಲಿಕಾನ್‌ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳು ಜಲಾವೃತವಾಗಿವೆ. ಅಲ್ಲದೇ ಸೋಮವಾರ ಹಲವು ಕಡೆಗಳಲ್ಲಿ ಬೃಹತ್‌ ಮರಗಳು ಧರೆಗೆ ಉರುಳಿ ಬಿದ್ದಿವೆ. ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : Unsafe City For Women : ಈ ನಗರಗಳು ಮಹಿಳೆಯರಿಗೆ ಸುರಕ್ಷಿತವಲ್ಲ NCRB

ಇದನ್ನೂ ಓದಿ : Shashi Tharoor : ಕಾಂಗ್ರೆಸ್ ಅಧ್ಯಕ್ಷ ಗದ್ದುಗೆ ಮೇಲೆ ಶಶಿ ಕಣ್ಣು..?

Fishing boat capsize in Mangalore, Uttara Kannada

Comments are closed.