Floating restaurant in kapu: ಕಾಪುವಿನಲ್ಲಿ ತೇಲುವ ರೆಸ್ಟೋರೆಂಟ್‌ ಹಾಗೂ ವಸತಿ ಗೃಹ ನಿರ್ಮಾಣ

ಉಡುಪಿ: (Floating restaurant in kapu) ಜಿಲ್ಲೆಯ ಕಾಪು ತಾಲೂಕಿನ ಉಳಿಯಾರು ಗ್ರಾಮದಲ್ಲಿ ಪ್ರವಾಸಿ ಆಕರ್ಷಣೆಯಾಗಿ ತೇಲುವ ರೆಸ್ಟೋರೆಂಟ್‌ ಹಾಗೂ ವಸತಿಗೃಹ ನಿರ್ಮಾಣ ಬಗ್ಗೆ ಅಗತ್ಯವಿರುವ ಎಲ್ಲಾ ನಿಯಮಗಳನ್ನು ಪರಿಶೀಲಿಸಿ, ಮಂಜೂರಾತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಹೇಳಿದರು.

ನಗರದ ರಜತಾದ್ರಿಯ ಜಿಲ್ಲಾಧಿಕಾರಿಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಪು ತಾಲೂಕಿನ ಉಳಿಯಾರು ಗ್ರಾಮದ ಹಿನ್ನೀರಿನಲ್ಲಿ ಫ್ಲೋಟಿಂಗ್‌ ರೆಸ್ಟೋರೆಂಟ್‌ ಹಾಗೂ ವಸತಿ ಗೃಹವನ್ನು ನಿರ್ಮಾಣ ಮಾಡಲು ನಿಗಧಿತ ಶುಲ್ಕ ಪಾವತಿ ಮಾಡಲು ಬದ್ದವಾಗಿರುವ ಬಗ್ಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ, ಎಲ್ಲಾ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಹಾಗೂ ಯಾವುದೇ ಕಾನೂನು ನಿಯಮಗಳ ಉಲ್ಲಂಘನೆ ಆಗದಿರುವ ಬಗ್ಗೆ ಪರಿಶೀಲಿಸಿ ಅನುಮತಿ ನೀಡುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಇನ್ನು ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ನಿಖರ ಸಂಖ್ಯೆಯನ್ನು ಇದುವರೆಗೂ ವ್ಯವಸ್ಥಿತವಾಗಿ ದಾಖಲು ಮಾಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಪ್ರವಾಸಿ ತಾಣಗಳ ನಿರ್ವಹಣೆಗೆ ಗುತ್ತಿಗೆ ಪಡೆದಿರುವ ಸಂಸ್ಥೆಗಳ ಮೂಲಕ ಅ ಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸಿಗರ ದಾಖಲೆಗಳನ್ನು ಕಂಪ್ಯೂಟರಿನಲ್ಲಿ ಅಗತ್ಯವಿರುವ ಪೊಲೀಸ್‌, ಸಿ. ಆರ್.‌ ಝಡ್‌ ಮತ್ತು ಸ್ಥಳೀಯ ಸಂಸ್ಥೆಗಳ ನಿರಾಪೇಕ್ಷಣ ಪತ್ರಗಳನ್ನು ಪಡೆಯಲು ಅನುಕೂಲವಾಗುವಂತೆ ಸಿಂಗಲ್‌ ವಿಂಡೋ ಸಿಸ್ಟಮ್‌ ಮೂಲಕ ಸೌಲಭ್ಯಗಳನ್ನು ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಈ ಬಗ್ಗೆ ಹೆಚ್ಚಿನ ಜಾಗೃತಿ ಮತ್ತು ಅರಿವು ಮೂಡಿಸುವಂತೆ ತಿಳಿಸಿದರು.

ಜಿಲ್ಲೆಯ ಕರಾವಳಿ ತೀರ ಪ್ರದೇಶದಲ್ಲಿ ಪ್ಯಾರಾ ಮೋಟರಿಂಗ್‌ ಅಡ್ವೆಂಚರ್‌ ಕ್ರೀಡೆಗಳನ್ನು ನಡೆಸಲು ಅನುಮತಿ ಕೋರಿರುವವರಿಗೆ ಅವರು ಸಲ್ಲಿಸಿರುವ ಎಲ್ಲಾ ಸುರಕ್ಷತಾ ಮತ್ತು ಅನುಮತಿ ಪತ್ರಗಳ ದಾಖಲಾತಿ ಪರಿಶೀಲಿಸಿ ಅನುಮತಿ ನೀಡುವಂತೆ ತಿಳಿಸಿದರು. ತ್ರಾಸಿ ಮರವಂತೆ ಹಾಗೂ ಕಾಪು ಬೀಚ್‌ ನಲ್ಲಿ ಮತ್ಸ್ಯಾಲಯ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಪರಿಶೀಲಿಸುವಂತೆ ತಿಳಿಸಿದರು.

ಜಿಲ್ಲಯಲ್ಲಿ ಪ್ರವಾಸಿ ತಾಣಗಳ ನಿರ್ವಹಣೆಗೆ ಗುತ್ತಿಗೆ ಪಡೆದಿರುವವರು, ನಿರ್ವಹಣೆ ಒಪ್ಪಂದದಲ್ಲಿನ ಷರತ್ತುಗಳನು ಕಟ್ಟುನಿಟ್ಟಾಗಿ ಪಾಲಿಸಿ ಯಾವುದೇ ಸಂದರ್ಭದಲ್ಲೊ ಪ್ರಾವಸಿಗರಿಗೆ ಅನಾನುಕೂಲವಾಗದಂತೆ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿದರು. ಹೆಬ್ರಿ ತಾಲೂಕಿನ ವರಂಗದಲ್ಲಿ ಇಕೋ ಟೂರಿಸಂ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ನಡೆಸುವಂತೆ ಹಾಗೂ ಪಡುಬಿದ್ರಿ ಕಡಲತೀರದಿಂದ ಪಡುಕೆರೆ ಕಡಲ ತೀರದವರೆಗೆ ಸೈಕಲ್‌ ಸರ್ಕ್ಯೂಟ್‌ ಹಾಗೂ ಕುಂದಾಪುರ ಕೋಡಿಬೀಚ್‌ನಿಂದ ಕೋಡಿ ತಲೆ ಡೆಲ್ಟಾಪಾಯಿಂಟ್‌ ವರೆಗೆ ಸೈಕಲ್‌ ಟ್ರ್ಯಾಕ್‌ ನಿರ್ಮಾಣ ಮಾಡುವ ಬಗ್ಗೆ ಸಂಬಂಧಿಸಿದ ಸಂಸ್ಥೆಗಳನು ಜಿಲ್ಲೆಗೆ ಆಹ್ವಾನಿಸಿ, ಟ್ರ್ಯಾಕ್‌ ನಿರ್ಮಾಣ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಇದನ್ನೂ ಓದಿ : ಮಂದಾರ್ತಿ ಮೇಳದಿಂದ ಕಾಲಮಿತಿ ಯಕ್ಷಗಾನ ಸೇವೆ : ಆಡಳಿತ ಮಂಡಳಿ ಆದೇಶ

ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಕ್ಷಿಪ್ರಗತಿಯಲ್ಲಿ ಮಾಹಿತಿ ದೊರೆಯಲು ಅನುಕೂಲವಾಗುವಂತೆ ಪ್ರವಾಸೋಧ್ಯಮ ಇಲಾಖೆಯು ವೆಬ್‌ ಸೈಟ್‌ ನಲ್ಲಿ ಎಲ್ಲಾ ರೀತಿಯ ಮಾಹಿತಿಗಳನ್ನು ವಿಡಿಯೋ ಮತ್ತು ಫೋಟೋ ಅಪ್ಲೋಡ್‌ ಮಾಡುವಂತೆ ಹಾಗೂ ಪ್ರವಾಸಿ ತಾಣಗಳ ಕುರಿತು ಕಿರು ಪುಸ್ತಕಗಳನ್ನು ಮುದ್ರಿಸಿ ಪ್ರವಾಸೋದ್ಯಮ ಸಂಘಟನೆಗಳಿಗೆ ವಿತರಿಸುವಂತೆ ಸೂಚನೆ ನೀಡಿದರು. ಪ್ರವಾಸೋದ್ಯಮ ಇಲಾಖೆಯ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಗತ್ಯವಿರುವ ಯೋಜನೆಗಳನ್ನು ರೂಪಿಸಲು ವಿವಿಧ ಖಾಸಗಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಅಭಿವೃದ್ದಿ ಯೋಜನೆಗಳನ್ನು ಸಿದ್ದಪಡಿಸುವಂತೆ ಹಾಗೂ ಜಿಲ್ಲೆಯ ವಿವಿಧ ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಮತ್ತು ಪ್ರವಾಸೋದ್ಯಮ ಕುರಿತ ಅನುಮತಿಗಳನ್ನು ಶೀಘ್ರದಲ್ಲಿ ನೀಡಲು ಅನುಕೂಲವಾಗುವಂತೆ ಉಪ ಸಮಿತಿಗಳನ್ನು ರಚಿಸಿಕೊಂಡು ಕಾರ್ಯನಿರ್ವಹಿಸುವಂತೆ ತಿಳಿಸಿದರು.

Floating restaurant in kapu: Construction of floating restaurant and residential house in Kapu

Comments are closed.