ಮಣಿಪಾಲ : ಪಾದರಕ್ಷೆ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಸೊತ್ತುಗಳು ನಾಶವಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.
ಗುರುವಾರ ರಾತ್ರಿ ಅಂಗಡಿ ಮಾಲೀಕರು ವ್ಯವಹಾರ ಮುಗಿಸಿ ಮನೆಗೆ ತೆರಳಿದ್ದರು. ನಂತರದಲ್ಲಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯೊಳಗೆ ಪೂಟ್‌ವೇರ್ ತುಂಬಿದ್ದರಿಂದಾಗಿ ಬೆಂಕಿ ಹೊತ್ತಿ ಉರಿದಿದೆ. ಮಳಿಗೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಸ್ಥಳೀಯರು ಕೂಡ ಅಗ್ನಿಶಾಮಕ ಸಿಬ್ಬಂದಿಗಳಿಗೆ ಸುದ್ದಿ ಮುಟ್ಟಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೆ ವ್ಯಾಪಿಸದ ಹಿನ್ನೆಲೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಆದರೆ ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿದೆ.
ಇದನ್ನೂ ಓದಿ : ಕರಾವಳಿಯಲ್ಲಿ ತಗ್ಗದ ಕೊರೊನಾ ಅಬ್ಬರ : ಸದ್ಯಕ್ಕಿಲ್ಲ ಶಾಲಾರಂಭ
ಇದನ್ನೂ ಓದಿ : ಉಡುಪಿ : MASK ಇಲ್ಲದಿದ್ರೆ ಕೊರೊನಾ ಟೆಸ್ಟ್ : ಮಾಸ್ಕ್ ಮರೆತೀರಾ ಹುಷಾರ್ !