Mangalore : ಹೇರ್‌ಬ್ಯಾಂಡ್‌ನಲ್ಲಿ ಚಿನ್ನ ಸಾಗಾಟ : ಏರ್‌ಪೋರ್ಟ್‌ನಲ್ಲಿ 21 ಲಕ್ಷ ಮೌಲ್ಯದ ಚಿನ್ನವಶ

ಮಂಗಳೂರು : ಇತ್ತೀಚಿನ ವರ್ಷಗಳಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ನಾನಾ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಇದೀಗ ಹೇರ್‌ಬ್ಯಾಂಡ್‌ನಲ್ಲಿ ಚಿನ್ನ ಸಾಗಾಟ ಮಾಡುವ ಮೂಲಕ ಸಿಕ್ಕಿಬಿದ್ದಿದ್ದಾರೆ. ಮಂಗಳೂರಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಎರಡು ಪ್ರಕರಣಗಳಿಂದ ಬರೋಬ್ಬರಿ 21 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ದುಬೈನಿಂದ ಬಂದಿದ್ದ ಮುರುಡೇಶ್ವರದ ವ್ಯಕ್ರಿಯೋರ್ವರು ಮಹಿಳೆಯ ಹೇರ್‌ಬ್ಯಾಂಡ್‌ನಲ್ಲಿ ಚಿನ್ನ ಸಾಗಾಟ ಮಾಡುತ್ತಿರುವ ಕುರಿತು ಮಂಗಳೂರಿನ ಕಸ್ಟಮ್ಸ್‌ ಅಧಿಕಾರಿಗಳು ಮಾಹಿತಿಯ ಮೇರೆಗೆ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. ಹೇರ್‌ ಬ್ಯಾಂಡ್‌ ನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 5,58,900ರೂಪಾಯಿ ಮೌಲ್ಯದ 115 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಲ್ಲದೇ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಚಿನ್ನ ಸಾಗಾಣಿಕೆ ಮಾಡಿದ ಮತ್ತೋರ್ವ ವ್ಯಕ್ತಿಯನ್ನು ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದು. ಬಂಧಿತ ವ್ಯಕ್ತಿಯಿಂದ ಸುಮಾರು 350 ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ ಪಡೆದಿದ್ದು, ಇದರ ಮೌಲ್ಯ ಸುಮಾರು 16 ಲಕ್ಷ ಎಂದು ಅಂದಾಜಿಸಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಚಿನ್ನಸಾಗಾಟ ಮಾಡುವ ಪ್ರಕರಣ ಹೆಚ್ಚುತ್ತಿದ್ದು, ಕಸ್ಟಮ್ಸ್‌ ಅಧಿಕಾರಿಗಳು ಹದ್ದಿನ ಕಣ್ಣು ಇರಿಸಿದ್ದಾರೆ. ಆದರೂ ಕೂಡ ಕಳ್ಳ ಮಾರ್ಗದ ಮೂಲಕ ಚಿನ್ನ ಸಾಗಿಸುವ ಕಾರ್ಯ ನಡೆಯುತ್ತಲೇ ಇದೆ.

Comments are closed.