Heavy Rain Alert : ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಮಳೆನಾಡಿನಲ್ಲಿ (Heavy Rain Alert) ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಆದರೆ ಉಳಿದ ಜಿಲ್ಲೆಗಳಲ್ಲಿ ಮಳೆ ಮರೀಚಿಕೆಯಾಗಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕರಾವಳಿ ಭಾಗಗಳಲ್ಲಿ ಬಿರುಗಾಳಿ 40-45 ಕಿಮೀ ನಿಂದ 55 ಕಿಮೀ ವರೆಗೂ ಹೆಚ್ಚಾಗುವ ಸಾಧ್ಯತೆ ಇದ್ದು ಭಾರೀ ಅಲೆಗಳು ತೀರಕ್ಕೆ ಅಪ್ಪಳಿಸಲಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯರು, ಪ್ರವಾಸಿಗರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : Recruitment of manual scavengers : ಉಡುಪಿ : ಪೌರಕಾರ್ಮಿಕರಿಗೆ ತರಬೇತಿ ಕಾರ್ಯಾಗಾರ

ಇದನ್ನೂ ಓದಿ : Udupi DC Vidyakumari K : ನೂತನ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಕೆ. ಅಧಿಕಾರ ಸ್ವೀಕಾರ

ಸುಳ್ಯ, ಮಂಗಳೂರು, ಪಣಂಬೂರು, ಅಂಕೋಲಾ, ಮರವಂತೆ, ಮಾವಿನಕಾಡು, ಬೈಂದೂರು, ಮೂಡಿಗೆರೆ, ಉಡುಪಿ, ಮಲ್ಪೆ, ಮುರುಡೇಶ್ವರ, ನಾಪೋಕ್ಲು, ಲಿಂಗನಮಕ್ಕಿ, ಕೊಟ್ಟಿಗೆಹಾರ, ಕೊಪ್ಪ, ಶೃಂಗೇರಿ, ಆಗುಂಬೆ, ಧರ್ಮಸ್ಥಳ, ಉಜಿರೆ, ಕಳಸ, ಹೊನ್ನಾವರ, ಶಿರಸಿ, ಸಿದ್ದಪುರ, ಸಾಗರ, ಶಿವಮೊಗ್ಗ ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ.

Heavy Rain Alert: Chance of heavy rain in the coast, mountains: Yellow alert announced

Comments are closed.