Heavy rain alert : ಉಡುಪಿ,‌ ದ.ಕ‌ ಜಿಲ್ಲೆಯಲ್ಲಿ ಜೂನ್ 19ರ ವರೆಗೆ ಭಾರೀ ಮಳೆ

ಬೆಂಗಳೂರು : (Heavy rain alert) ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ದುರ್ಬಲವಾಗಿದೆ. ದಿನವಿಡೀ ಕರಾವಳಿ ಜಿಲ್ಲೆಯಾದ್ಯಂತ ಬಿಸಿಲಿನ ವಾತಾವರಣದಿಂದ ಕೂಡಿದ್ದರೆ, ರಾತ್ರಿ ವೇಳೆಗೆ ಗುಡುಗು ಮಿಂಚಿನೊಂದಿಗೆ ಮಳೆಯಾಗುತ್ತದೆ. ಬಿಪರ್‌ಜಾಯ್‌ ಚಂಡಮಾರುತದ ಪರಿಣಾಮವಾಗಿ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಇನ್ನ ದಕ್ಷಿಣ ಕನ್ನಡ ಜಿಲ್ಲೆಗಳಾದ ಮಂಗಳೂರು, ಉಡುಪಿ ಜಿಲ್ಲೆಯ ಹೆಚ್ಚಿನ ಭಾಗದಲ್ಲಿ ಬಿಸಿಲಿ, ಮೋಡ, ತುಂತುರು ಮಳೆಯಾಗಿದೆ.‌

ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡುಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಒಣಹವೆ ಮುಂದುವರೆಯಲಿದೆ , ಕಾರವಾರ, ಹೊಸಕೋಟೆ, ತಿಪಟೂರು, ಗೋಣಿಕೊಪ್ಪಲು, ಕೋಟ, ಹೊನ್ನಾವರ, ಮಾಲೂರು, ಅಂಕೋಲಾ, ಮಂಕಿ, ಬೆಳ್ತಂಗಡಿ, ಹುನಸೂರು, ಕದ್ರಾ, ಬೇಲಿಕೇರಿ, ಪುತ್ತೂರು, ಕುಂದಾಪುರ, ಜ್ಞಾನಭಾರತಿ, ದೊಡ್ಡಬಳ್ಳಾಪುರ, ಟೀ ನರಸೀಪುರ, ಸರಗೂರು, ಭಾಗಮಂಡಲದಲ್ಲಿ ಕೂಡ ಮಳೆಯಾಗಲಿದೆ.

ಜೂನ್‌ 18ರಿಂದ ರಾಜ್ಯದ ಅಲ್ಲಲ್ಲಿ ಮುಂಗಾರು ಮಳೆ ಚುರುಕಾಗುವ ಲಕ್ಷಣಗಳಿದ್ದರೂ ಭಾರೀ ಮಳೆಯ ಲಕ್ಷಣಗಳು ಇರುವುದಿಲ್ಲ. ಹೀಗಾಗಿ ರಾಜ್ಯದಲ್ಲಿ ಈ ಬಾರೀ ಮುಂಗಾರು ಮಳೆ ದುರ್ಬಲತೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಪ್ರಸ್ತುತ ಚಂಡಮಾರುತ ಅಲೆಯ ಹಿನ್ನಲೆಯಿಂದ ಅರಬ್ಬೀ ಸಮುದ್ರ ಅಬ್ಬರವೂ ಹೆಚ್ಚಾಗಿದೆ.

ಇದನ್ನೂ ಓದಿ : Coffee Prices Rise : ಕಾಫಿಗೆ ಬಂತು ದಾಖಲೆಯ ಬೆಲೆ, ಬೆಳೆಗಾರರಿಗೆ ಖುಷಿ : 39,800 ಟನ್‌ ಕಾಫಿ ರಫ್ತು

ಅರಬ್ಬಿ ಸಮುದ್ರದ ಅಬ್ಬರದಿಂದಾಗಿ ಕರಾವಳಿ ಭಾಗಗಳಲ್ಲಿ ಕಡಲ್ಕೊರೆತ ಕೂಡ ಹೆಚ್ಚಾಗಿರುತ್ತದೆ. ಬಿಪರ್‌ಜಾಯ್‌ ಚಂಡಮಾರುತ ಪ್ರಭಾವದಿಂದ ಅರಬ್ಬಿ ಸಮುದ್ರದ ಅಲೆಗಳ ಎತ್ತರ ಮೂರರಿಂದ ನಾಲ್ಕು ಮೀಟರ್‌ ಎತ್ತರ ಇರಲಿದೆ ಎನ್ನುವ ಮಾಹಿತಿ ಇದೆ. ಹೀಗಾಗಿ ಮುಂದಿನ ಜೂನ್‌ 19ರವರೆಗೆ ಸಮುದ್ರಕ್ಕೆ ಪ್ರವಾಸಿಗರು, ಸ್ಥಳೀಯರು ಹಾಗೂ ಮೀನುಗಾರರು ಇಳಿಯಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

Heavy rain alert: Heavy rain till June 19 in Udupi, DA district

Comments are closed.