Heavy Rain Alert in Coastal : ಹವಾಮಾನ‌ ವರದಿ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 4 ದಿನ‌‌ ಭಾರೀ ಮಳೆ

ಬೆಂಗಳೂರು : (Heavy Rain Alert in Coastal) ರಾಜ್ಯದಲ್ಲಿ ಮುಂದಿನ 4 ದಿನಗಳವರೆಗೂ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನಿನ್ನೆ ಬೆಳಗ್ಗೆಯಿಂದ ಕರಾವಳಿಯ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಇನ್ನು ಕೆಲವು ಭಾಗದಲ್ಲಿ ಉರಿ ಬಿಸಿಲಿನಿಂದ ಕೂಡಿದ ವಾತಾವರಣ ಕಂಡು ಬಂದಿದೆ. ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಸಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದ ಮತ್ತೆ ಮುಂಗಾರು ಮಳೆಯ ಆರ್ಭಟ ಜೋರಾಗಲಿದೆ. ಹಾಗೆಯೇ ಮುಂದಿನ ಒಂದು ವಾರಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿ ಜಿಲ್ಲೆಗಳಲ್ಲಿ ಹಲವು ಪ್ರದೇಶಗಳಲ್ಲಿ ಬಿಸಿಲು ಮತ್ತೆ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆ ಇದೆ ಎಂದು ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಜೂನ್‌ 21ರಿಂದ ಮುಂಗಾರು ಮಳೆಯ ಅಬ್ಬರ ಇನ್ನೂ ಹೆಚ್ಚಾಗುವ ಎಲ್ಲಾ ಲಕ್ಷಣಗಳು ಕೂಡ ಗೋಚರಿಸುತ್ತಿದೆ. ಹಾಗೆಯೇ ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಇದನ್ನೂ ಓದಿ : Udupi Water Protest : ಉಡುಪಿಯಲ್ಲಿ ನೀರಿನ ಸಮಸ್ಯೆ : ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯತ್‌ಗೆ ನುಗ್ಗಿದ ಮಹಿಳೆಯರು

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಜೋರಾಗಲಿದ್ದು, ಈ ಹಿನ್ನಲೆಯಲ್ಲಿ ಮುಜಾಗ್ರತಾ ಕ್ರಮವನ್ನು ಸೂಚಿಸಲಾಗಿದೆ. ಅಲ್ಲದೇ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದ್ದು, ಪ್ರವಾಸಿಗರಿಗೂ ಸಹ ಇಲ್ಲಿನ ಪ್ರವಾಸಿ ತಾಣಗಳಲ್ಲಿ ನಿರ್ಬಂಧ ಹೇರಲಾಗಿದೆ ಎನ್ನಲಾಗಿದೆ.

Heavy Rain Alert in Coastal: Weather report: Heavy rain in coastal districts for the next 4 days

Comments are closed.