Heavy rain alert in Karnataka : ಉಡುಪಿ, ದ‌.ಕ, ಉತ್ತರ ಕನ್ನಡ ಜಿಲ್ಲೆಯಲ್ಲಿಂದು ಭಾರೀ ಮಳೆ

ಬೆಂಗಳೂರು : (Heavy rain alert in Karnataka) ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಳುವ ಸಾಧ್ಯತೆ ಇದ್ದು, ಹಾಆಗಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಅಧಿಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಕೂಡ ಮೋಡ ಚದುರಿದಂತೆ ವ್ಯಾಪಕ ಮಳೆಯಾಗಲಿದೆ ಎಂದು ಎಂಐಡಿ ತಿಳಿಸಿದೆ.

ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ತಮಕೂರು, ಚಿತ್ರದುರ್ಗ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಜೋರಾಗಿ ಮಳೆ ಬೀಳುವ ಮುನ್ಸೂಚನೆ ಇದೆ.

ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರಕನ್ನಡ, ಹಾವೇರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ. ಬೀದರ್‌, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಯಾದಗಿರಿ, ಗದಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : June 20 power cut : ಉಡುಪಿ : ಜೂ.20ಕ್ಕೆ ಜಿಲ್ಲೆಯ ಹಲವೆಡೆ ವಿದ್ಯುತ್‌ ವ್ಯತ್ಯಯ

ಪ್ರತಿವರ್ಷ ಜೂನ್‌ ಮೊದಲ ವಾರದಲ್ಲಿ ಮುಂಗಾರು ಮಳೆ ಆಗಮನದಿಂದ ರಾಜ್ಯದಲ್ಲಿ ಉತ್ತಮ ಮಳೆ ಆಗುತ್ತಿತ್ತು. ಆದರೆ ಈ ವರ್ಷ ಮೂರನೇ ವಾರ ಕಳೆದರೂ ಏಣಿಕೆರಯಷ್ಟು ಮಳೆ ಆಗಿಲ್ಲ. ಹೀಗಾಗಿ ರಾಜ್ಯ ರೈತರ ಆತಂಕಕ್ಕೆ ಕಾರಣವಾಗಿದೆ. ಆಗಿರುವ ಮಳೆಯನ್ನು ನಂಬಿಕೊಂಡು ಕರಾವಳಿ ಭಾಗಗಳಲ್ಲಿ ಬಿತ್ತನೆ ಬೀಜವನ್ನು ಗದ್ದೆಗಳಿಗೆ ಹಾಕಿ ಆಕಾಶವನ್ನು ನೋಡುತ್ತಾ ಕಾಯುತ್ತಿದ್ದಾರೆ. ಇನ್ನು ಕೆಲವೆಡೆ ಬಿತ್ತನೆ ಬೀಜ ಗೊಬ್ಬರಗಳನ್ನು ಸಿದ್ದ ಮಾಡಿಕೊಂಡು ಮಳೆಗಾಗಿ ಕಾಯುತ್ತಿದ್ದಾರೆ. ಮುಂಗಾರು ಮಳೆ ಆರಂಭದಲ್ಲೇ ಕೈ ಕೊಟ್ಟ ಕಾರಣದಿಂದ ರಾಜ್ಯವೇ ಆತಂಕಕ್ಕೆ ಒಳಗಾಗಿದೆ.

Heavy rain alert in Karnataka : Heavy rain in Udupi, D.K., Uttara Kannada district

Comments are closed.