ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ ಹಾಗೂ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಸುರಿಯಲಿದೆ.
ರಾಜ್ಯದಲ್ಲಿ ಹವಾಮಾನ ವೈಪರುತ್ಯ ಉಂಟಾಗಿದ್ದು, ಉಷ್ಣಾಂಶ ಏರಿಳಿತದಿಂದ ರಾಜ್ಯದಲ್ಲಿ ತಾಪಮಾನ ಹೆಚ್ಚಳದ ಜೊತೆಗೆ ಮಾರ್ಚ್ ತಿಂಗಳ ಅಂತ್ಯದವರೆಗೆ ಮಳೆ ಬೀಳುವ ಸಾಧ್ಯತ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.