- Advertisement -
ಮಂಗಳೂರು : ಮುಂದಿನ 16 ಗಂಟೆಗಳ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆಯನ್ನು ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದಲೂ ಉತ್ತಮ ಮಳೆ ಸುರಿಯುತ್ತಿದೆ. ನಾಳೆ ಬೆಳಗ್ಗೆ 8 ಗಂಟೆಯ ಒಳಗೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಜನರು ಎಚ್ಚರದಿಂದ ಇರಬೇಕು ಅಲ್ಲದೇ ಯಾರೂ ಕೂಡ ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ನೀಡಿದೆ.