ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ : ಕರಾವಳಿಯಲ್ಲಿಯೂ ಸುರಿಯಲಿದೆ ಮಳೆ

ಬೆಂಗಳೂರು : ಕರಾವಳಿ ಭಾಗ ಸೇರಿದಂತೆ ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಫೆಬ್ರವರಿ 18 ರಿಂದ 21ರ ವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಮಳೆಯಾಗಲಿದೆ, ಅಲ್ಲದೇ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಹಾಗೂ ದಕ್ಷಿಣ ಒಳನಾಡಿನ ತುಮಕೂರು ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಫೆ.20ರ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Comments are closed.