Heavy rain in coastal‌ : ಕರಾವಳಿಯಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ : ಯೆಲ್ಲೊ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ವರುಣನ (Heavy rain in coastal‌) ಆರ್ಭಟ ಜೋರಾಗಿದೆ. ಇನ್ನು ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕಳೆದ ವಾರ ಮಳೆಯಿಂದಾಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮಳೆ ಕೊಂಚ ಇಳಿಕೆ ಕಂಡು ಶಾಲೆ ಶುರು ಮಾಡಲಾಗಿತ್ತು. ಆದರೆ ಈಗ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ಮಳೆ ನೀರಿನಿಂದನದಿ, ಹಳ್ಳ, ತೋಡುಗಳು ತುಂಬಿಕೊಂಡಿದ್ದು, ಅವುಗಳನ್ನು ದಾಟಿಕೊಂಡು ಬರುವ ಮಕ್ಕಳಿಗೆ ತೊಂದರೆಯಾದಂತೆ ಆಗಿದೆ.

ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೊಂದು ಕಡೆ ಮಳೆ ಮುಂದುವರೆಯಲಿದೆ. ಕರಾವಳಿ ಹೆಚ್ಚಿನ ಪ್ರದೇಶಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40 ರಿಂದ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ಸ್ಥಳೀಯರು, ಪ್ರವಾಸಿಗರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : Education News : ಉಡುಪಿ : ಪ್ರವೇಶ ಪರೀಕ್ಷೆ ಬರೆಯದೇ ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ ಪ್ರವೇಶಾತಿ: ಅರ್ಜಿ ಆಹ್ವಾನ

ಇದನ್ನೂ ಓದಿ : Ration Card News‌ : ಉಡುಪಿ : ಪಡಿತರ ಚೀಟಿದಾರರು ಬ್ಯಾಂಕ್ ಖಾತೆ ತೆರೆಯಲು ಶಿಬಿರ ಆಯೋಜನೆ

ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನೂ ಮುಂದಿನ ಮೂರು ದಿನಗಳವರೆಗೂ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರೊನಲ್ಲಿ ಮೋಡ ಕವಿದ ವಾತಾವರಣ ಕೂಡಿದ್ದು, ಒಂದೆರಡು ಬಾರೀ ಹನಿ ಹನಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

Heavy rain in coastal : Chance of heavy rain in coastal for the next 4 days : Yellow alert announced

Comments are closed.