Heavy rain in coastal Karnataka : ಕರಾವಳಿಯಲ್ಲಿ 2 ದಿನ ಭಾರೀ ಮಳೆ : ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : (Heavy rain in coastal Karnataka) ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನಿನ್ನೆ ಬೆಳಗ್ಗೆಯಿಂದ ಶುರುವಾದ ಮಳೆ ಬಿಟ್ಟು ಬಿಡದೇ ಸುರಿಯುತ್ತಿದೆ. ಸದ್ಯ ಮುಂಗಾರು ಮಳೆ ರಾಜ್ಯದ ಕರಾವಳಿ ಭಾಗದಲ್ಲಿ ಮಾತ್ರ ಚುರುಕಾಗಿದ್ದು, ಮುಂದಿನ ದಿನಗಳಲ್ಲಿ ವರುಣನ ಆರ್ಭಟ ಜೋರಾಗಲಿದ್ದು, ಆರೆಂಜ್‌ ಅಲರ್ಟ್‌ ಹಾಗೂ ಯೆಲ್ಲೋ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ. ಉತ್ತರ ಒಳನಾಡಿನಲ್ಲಿ ವರುಣನ ಆಗಮನವಿಲ್ಲದೇ ಕರಾವಳಿ ಜಿಲ್ಲೆಗಳಲ್ಲಿ ಆರ್ಭಟ ಜೋರಾಗಿದ್ದು, ಮುಂದಿನ ಐದು ದಿನಗಳ ಕಾಲ ಮಳೆರಾಯನ ಆರ್ಭಟ ಇನ್ನಷ್ಟು ಜೋರಾಗಲಿದೆ.

ವಾಡಿಕೆಯಂತೆ ಈ ಬಾರೀ ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭದಲ್ಲಿ ವಿಳಂಬವಾಗಿದ್ದರೂ, ಈಗ ರಾಜ್ಯದಲ್ಲಿ ಚುರುಗೊಂಡಿರುತ್ತದೆ. ಹೀಗಾಗಿ ಕರಾವಳಿ ಭಾಗಗಳಲ್ಲಿ ಮಳೆ ವಿಳಂಬದಿಂದಾಗಿ ಕೃಷಿ ಚಟುವಟಿಕೆಗಳು ತಡವಾಗಿ ಆರಂಭಗೊಂಡಿದೆ. ಆದರೆ ಉತ್ತರ ಕರ್ನಾಟಕ ಸೇರಿದಂತೆ ಒಳನಾಡಿನ ಜಿಲ್ಲೆಗಳಿಗೆ ಮಳೆಯ ಅವಶ್ಯಕತೆ ತುಂಬಾ ಇರುತ್ತದೆ.

ಇಂದಿನಿಂದ ಜೂನ್‌ 28ರವರೆಗೂ ಕರಾವಳಿಯ ಉತ್ತರ ಕನ್ನಡ ಜಿಲ್ಲೆಗೆ ಎರಡು ದಿನ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದೊಂದು ದಿನ ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉಳಿದ ದಿನಗಳು ಈ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ : Nikitha kulal : ಉಡುಪಿ : ವಿದ್ಯಾರ್ಥಿನಿ ನಿಖಿತಾ ಕುಲಾಲ್‌ ಅನುಮಾನಸ್ಪದ ಸಾವು ಪ್ರಕರಣ : ಸಿಟಿ ಆಸ್ಪತ್ರೆ ಮುಂದೆ ಎಬಿವಿಪಿ ಪ್ರತಿಭಟನೆ

ಇದನ್ನೂ ಓದಿ : Child Protection Committee meeting : ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಡಾ. ತಿಪ್ಪೇಸ್ವಾಮಿ

ಮುಂದಿನ ಎರಡು ದಿನ ದಕ್ಷಿನ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಮೈಸೂರು, ಚಿತ್ರದುರ್‌, ವಿಜಯಪುರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy rain in coastal Karnataka: 2 days of heavy rain in coastal Karnataka: Orange alert announced

Comments are closed.