Heavy rain in Coastal : ಕರಾವಳಿ, ಕೊಡಗಿನಲ್ಲಿಂದು ಭಾರೀ ಮಳೆ : ಯೆಲ್ಲೋ ಅಲರ್ಟ್‌ ಘೋಷಣೆ

ಉಡುಪಿ/ಮಡಿಕೇರಿ : Heavy rain in Coastal : ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆ ರಾಯ ಮತ್ತೆ ಆರ್ಭಟಿಸುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಮಾತ್ರವಲ್ಲದೇ ಕೊಡಗು ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದ್ದು, ನಾಳೆ ಭಾರೀ ಗಾಳಿ ಬೀಸಲಿದೆ. ಅಲ್ಲದೇ ಜುಲೈ ೧೩ರಿಂದ ಮತ್ತೆ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿತ್ತು. ನಿನ್ನೆಯ ವರೆಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತು. ಬಹುತೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಸಾಕಷ್ಟು ಕುಟುಂಬಗಳನ್ನು ಜಿಲ್ಲಾಡಳಿತಗಳು ಸ್ಥಳಾಂತರ ಮಾಡಿತ್ತು. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು.

ಇಂದು ಉಡಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆರಾಯ ಕೊಂಚ ಬಿಡುವು ಕೊಟ್ಟಿದೆ. ಆದರೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಸೇರಿದಂತೆ ಕರಾವಳಿ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಇಂದು ಮಳೆಯಾಗಲಿದೆ ಎಂದಿದೆ. ನಾಳೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಜನರು ಎಚ್ಚರಿಕೆಯಿರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : Crime News : ತೆಕ್ಕಟ್ಟೆ : ಸ್ಕೂಟಿ ಸ್ಕಿಡ್‌ ಆಗಿ ಉದ್ಯಮಿ ಸಾವು ಪ್ರಕರಣ : ಮೃತರ ಮನೆಗೆ ಶಾಸಕ ಕಿರಣ್‌ ಕೊಡ್ಗಿ ಭೇಟಿ

ಇದನ್ನೂ ಓದಿ : Udupi Crime : ಅಕ್ರಮ ಅಸ್ತಿ ಪ್ರಕರಣ: ಉಡುಪಿ ಸರಕಾರಿ ಅಧಿಕಾರಿಗೆ 1ವರ್ಷ ಶಿಕ್ಷೆ ಹಾಗೂ ರೂ 1ಲಕ್ಷ ದಂಡ

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿಯೂ ಮಳೆಯ ಆರ್ಭಟ ಮುಂದುವರಿದಿದೆ. ಜುಲೈ 13 ರ ನಂತರ ರಾಜ್ಯದಲ್ಲಿ ಮತ್ತೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದರೂ ಕೂಡ ರಾಜ್ಯದ ಬಹುತೇಕ ಕಡಗಳಲ್ಲಿ ಈ ಬಾರಿ ಮಳೆ ಕ್ಷೀಣಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮೋಡ ಬಿತ್ತನೆ ಕಾರ್ಯವನ್ನು ಕೈಗೊಳ್ಳಲು ಚಿಂತನೆ ನಡೆಸಿದೆ.

Heavy rain in Coastal, Kodagu: Yellow alert announced

Comments are closed.