ಮಂಗಳೂರು : ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಕರಾವಳಿ ಭಾಗದಲ್ಲಿ ಆರ್ಭಟವನ್ನು ಮುಂದುವರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇತ್ರಾವತಿ, ಕುಮಾರಧಾರ ನದಿಗಳು ತುಂಬಿ ಹರಿಯುತ್ತಿದೆ. ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಜುಲೈ 16 ರಂದು ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿಯ ಪ್ರಮುಖ ಪುಣ್ಯಕ್ಷೇತ್ರಗಳಾಗಿರುವ ಧರ್ಮಸ್ಥಳದ ನೇತ್ರಾವತಿ ಸ್ಥಾನಘಟ್ಟ ಹಾಗೂ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರ ಹಾಗೂ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಇನ್ನು ಉಪ್ಪಿಂಗಡಿಯಲ್ಲಿಯೂ ನೀರಿನ ಮಟ್ಟ ಏರಿಕೆಯಾಗಿದೆ.
ಇದನ್ನೂ ಓದಿ : Master card : ಗ್ರಾಹಕರ ಸೇರ್ಪಡೆ ಮಾಡದಂತೆ ಮಾಸ್ಟರ್ ಕಾರ್ಡ್ ಗೆ ಆರ್‌ಬಿಐ ನಿರ್ಬಂಧ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು – ಪಾಣಾಜೆ ಸಂಪರ್ಕಿಸುವ ಚೇಳ್ಯಡ್ಕ ಸೇತುವೆ ಭಾರೀ ಮಳೆಗೆ ಮುಳುಗಡೆಯಾಗಿದೆ. ಅಲ್ಲದೇ ಹಲವು ಕಡೆಗಳಲ್ಲಿ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದೆ ಇದರಿಂದಾಗಿ ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯವಾಗಿದೆ. ನಾಳೆ ಭಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ನದಿಪಾತ್ರದಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ : ಜೊತೆ ಜೊತೆಯಲಿ ಪಯಣ ಅರ್ಧಕ್ಕೆ ನಿಲ್ಲಿಸಿದ್ರಾ ಅನುಸಿರಿಮನೆ…?! ಮೇಘಾ ಶೆಟ್ಟಿ ಹೇಳಿದ್ದೇನು ಗೊತ್ತಾ?!
ಕಳೆದ ಮೂರು ದಿನಗಳಿಂದಲೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗು ತ್ತಿದ್ದು, ನಾಳೆ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಳವಾಗಲಿದೆ. ಅಲ್ಲದೇ ಮಳೆಯಿಂದ ಉಂಟಾಗಬಹುದಾದ ಮುನ್ನೆಚ್ಚರಿಕೆಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಕೈಗೊಂಡಿದೆ. ಅಲ್ಲದೇ ಮೀನುಗಾರರು ಯಾವುದೇ ಕಾರಣಕ್ಕೂ ನದಿ ಹಾಗೂ ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ನೀಡಲಾಗಿದೆ.