Heavy Rain Red Alert : ಕರಾವಳಿಯಲ್ಲಿ ಮೇಘಸ್ಪೋಟ : ರೆಡ್‌ ಅಲರ್ಟ್‌ ಘೋಷಣೆ, ಶಾಲೆಗಳಿಗೆ ರಜೆ, 5 ದಿನ ಸುರಿಯಲಿದೆ ಭಾರಿ ಮಳೆ

ಮಂಗಳೂರು : ಕರಾವಳಿ ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಆತಂಕ ಶುರುವಾಗಿದೆ. ಮೇಘಸ್ಪೋಟದಿಂದಾಗಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನೆರೆ ಹಾವಳಿ ಉಂಟಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರೆಡ್‌ ಅಲರ್ಟ್‌ (Heavy Rain Red Alert) ಘೋಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದಲೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಜಿಲ್ಲೆಯ ಜೀವನದಿಗಳಾಗಿರುವ ಸೀತಾನದಿ, ಸೌಪರ್ಣಿಕಾ, ವಾರಾಹಿ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಸೌಪರ್ಣಿಕಾ ನದಿಯಿಂದಾಗಿ ಬೈಂದೂರು ತಾಲೂಕಿನ ನಾವುಂದ, ಮರವಂತೆ ಭಾಗಗಳಲ್ಲಿ ಕೃತಕ ನೆರೆ ಹಾವಳಿ ಉಂಟಾಗಿದೆ. ನೂರಾರು ಮನೆಗಳಿಗೆ ಜಲದಿಗ್ಬಂಧನ ಉಂಟಾಗಿದೆ. ಇನ್ನು ಕೋಟ ಮೂರು ಕೈ ಸಮೀಪದ ಚಿತ್ರಪಾಡಿ, ಕಾರ್ಕಡ, ಹಡೋಲು, ಬೇಳೂರು, ಯಾಳಹಕ್ಲು, ಗುಂಡ್ಮಿ, ಪಾರಂಪಳ್ಳಿ ಭಾಗಗಳಲ್ಲಿ ನೆರೆ ಹಾವಳಿ ಉಂಟಾಗಿದೆ. ಉಪ್ಪೂರು ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಪ್ರಾಥಮಿಕ ಶಾಲೆ ಜಲಾವೃತವಾಗಿದೆ. ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಎರಡು ದಿನಗಳ ಕಾಲ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಳೆಯಾರ್ಭಟ ಜೋರಾಗಿದೆ. ಮಂಗಳೂರು ಹೊರವಲಯದ ಕಣ್ಣೂರು ಬಳಿಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಮನೆಯ ಮೇಲೆ ಉರುಳಿ ಬಿದ್ದಿದೆ. ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಆತಂಕದಲ್ಲಿದ್ದ ಹತ್ತು ಮನೆಗಳ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಿದ್ದಾರೆ. ಇನ್ನು ಸುಳ್ಯ ಪಟ್ಟಣದಲ್ಲಿ ಗುಡ್ಡವೊಂದು ವಾಣಿಜ್ಯ ಸಂಕೀರ್ಣದ ಮೇಲೆ ಕುಸಿದು ಬಿದ್ದಿದೆ. ಸುಳ್ಯ ತಾಲೂಕಿನ ಬಹುತೇಕ ಕಡೆಗಳಲ್ಲಿ ನೆರೆ ಹಾವಳಿ ಉಂಟಾಗಿದ್ದು, ಜನರನ್ನು ದೋಣಿಗಳ ಮೂಲಕ ಸುರಕ್ಷಿತ ಸ್ಥಳಗಳಿಗೆ ಸಾಗಾಟ ಮಾಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ರಣಮಳೆ ಸುರಿದಿದೆ. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೊನ್ನಾವರ, ಕುಮಟಾ ಭಾಗಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯ ಅಘನಾಶಿನಿ ನದಿ ಉಕ್ಕಿ ಹರಿಯುತ್ತಿದೆ. ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂದಿನ ೪೮ ಗಂಟೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ : Shivamogga Harsha family : ಗೃಹ ಸಚಿವರ ವಿರುದ್ಧ ಹರ್ಷ ಕುಟುಂಬಸ್ಥರ ಆಕ್ರೋಶ : ವೈರಲ್ ಆಯ್ತು ವಿಡಿಯೋ

ಇದನ್ನೂ ಓದಿ : 2 Days Holiday : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ದಿನ ಶಾಲೆಗಳಿಗೆ ರಜೆ : ಇಲ್ಲಿದೆ ಪರಿಷ್ಕೃತ ಆದೇಶ

Heavy Rain Red Alert Costal Karnataka

Comments are closed.