ಕರಾವಳಿಯಲ್ಲಿ ಭಾರೀ ಮಳೆ ರೆಡ್‌ ಅಲರ್ಟ್‌ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಮಂಗಳೂರು :School College holiday : ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳ ಸುರಿಯುತ್ತಿದ್ದು, ಜುಲೈ 25 ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುನ್ನೆಚರಿಕಾ ಕ್ರಮವಾಗಿ ಮಂಗಳವಾರ ಕೂಡ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜು, ಕಾಲೇಜು, ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಹಲವು ಕಡೆಗಳಲ್ಲಿ ಮನೆಗಳು ಕುಸಿತವಾಗಿದ್ದು, ಮರಗಳು ಉರುಳಿ ಬಿದ್ದು ಲಕ್ಷಾಂತರ ಮೌಲ್ಯದ ನಷ್ಟ ಸಂಭವಿಸಿದೆ. ಸುಬ್ರಹ್ಮಣ್ಯದಲ್ಲಿ ಕುಮಾರಾಧಾರ ನದಿ ತುಂಬಿ ಹರಿಯುತ್ತಿರುವುದರಿಂದಾಗಿ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಮಂಗಳೂರು, ಮೂಡಬಿದಿರೆ ತಾಲೂಕುಗಳಲ್ಲಿಯೂ ಮಳೆಯಾಗುತ್ತಿದೆ. ಇಂದು ಕಡಬ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಇಂದು ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಅಲ್ಲದೇ ನಾಳೆ ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆಯನ್ನು ಘೋಷಿಸಿದೆ.

ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆ : ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು (School College holiday) ರೆಡ್ ಅಲರ್ಟ್‌ ಸೂಚಿಸಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು (ಜುಲೈ 24) ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ಜಿಲ್ಲೆಯಲ್ಲಿ ಜುಲೈ 25ರಂದು ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಉಳಿದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್‌, ಐಟಿಐ ರಜೆ ಇರುವುದಿಲ್ಲ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ಇರುತ್ತದೆ. ಆದರೂ ಕಾಲೇಜುಗಳಲ್ಲಿ ಪಾಠ ಪ್ರವಚನಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಗಳನ್ನು ನೀಡಲಾಗಿದೆ.

ಇದನ್ನೂ ಓದಿ : Udupi power cut : ಉಡುಪಿ : ಜುಲೈ 25, 26 ರಂದು ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ವಿದ್ಯುತ್‌ ಕಡಿತ, ಇಲ್ಲಿದೆ ಮಾಹಿತಿ

ಇದನ್ನೂ ಓದಿ : NEET UG 2023 Counselling : NEET ಯುಜಿ ಕೌನ್ಸೆಲಿಂಗ್ 2023 : ಮೊದಲ ಸುತ್ತಿನ ನೋಂದಣಿ, ಆಯ್ಕೆ ಶೀಘ್ರದಲ್ಲೇ ಪ್ರಾರಂಭ

  • ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.
  • ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.
  • ಕಠಿಣವಾದ ದಾರ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
  • ದುರ್ಬಲ ಅಥವಾ ಶಿಥಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
  • ಈಗ ಮಳೆಯಾಗುವ ಮುಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶಿನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.
  • ವಿದ್ಯಾರ್ಥಿಗಳ ಪೋಷಕರು ಅಥವಾ ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳ ನೀರು ಇರುವ ತಗ್ಗು ಪ್ರದೇಶ, ಕರೆ, ನದಿ ತೀರ, ಸಮುದ್ರತೀರಕ್ಕೆ ಹೋಗದಂತೆ ಎಚ್ಚರ ವಹಿಸುವುದು.
  • ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
  • ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು.

Comments are closed.