Heavy Rainfall Alert : ಮುಂದಿನ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ನಿನ್ನೆ ಮುಂಜಾನೆಯಿಂದ ಮೋಡ ಕವಿದ ವಾತಾವರಣದಿಂದ (Heavy Rainfall Alert) ಕೂಡಿದ್ದು, ಮಧ್ಯಾಹ್ನ ಹೊತ್ತಿಗೆ ಸುಡು ಬಿಸಿಲಿನಿಂದ ಕೂಡಿತ್ತು. ಆದರೆ ಸಂಜೆ ಹೊತ್ತಿಗೆ ಬಿರುಗಾಳಿ ಸಹಿತ ಜೋರಾಗಿ ಮಳೆ ಸುರಿದಿದೆ. ಇಂದು ಮುಂಜಾನೆಯಿಂದ ಜೋರಾದ ಗಾಳಿಯೊಂದಿಗೆ ಮಳೆಯಾಗಿದೆ. ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಸಾಕಷ್ಟು ಮುಂಗಾರು ಮಳೆಯಾಗಿದ್ದು, ಕರಾವಳಿ ವರುಣನ ಆರ್ಭಟ ಜೋರಾಗಿದೆ. ಸುಮಾರು ಇಪ್ಪತ್ತು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಡದೇ ಮಳೆ ಸುರಿದಿದೆ. ಇನ್ನು ಮುಂದಿನ ಐದು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ : Maravante Beach : ಮರವಂತೆ ಬೀಚ್‌ನಲ್ಲಿ ಯುವಕ ನೀರುಪಾಲು : ಪ್ರವಾಸಿಗರ ನಿರ್ಲಕ್ಷ್ಯಕ್ಕೆ ಬೀಳುತ್ತಿಲ್ಲ ಬ್ರೇಕ್‌

ಇದನ್ನೂ ಓದಿ : Udupi news : ಮೀನುಗಾರರಿಗೆ ಗುಡ್‌ ನ್ಯೂಸ್‌ : ಸಾಮೂಹಿಕ ಅಪಘಾತ ವಿಮಾ ಯೋಜನೆ ಘೋಷಿಸಿದ ಸರಕಾರ

ಕರಾವಳಿ ಜಿಲ್ಲೆಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ ಸುಮಾರು ಗರಿಷ್ಠ 45 ಕಿಲೋ ಮೀಟರ್‌ ವೇಗದಲ್ಲಿ ಬೀಸಲಿದೆ. ಕೆಲವೊಮ್ಮೆ ಪ್ರತಿ ಗಂಟೆಗೆ 50 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.ಈ ಕಾರಣದಿಂದ ಪ್ರವಾಸಿಗರು, ಸ್ಥಳೀಯರು ಹಾಗೂ ಮೀನುಗಾರರು ಕಡಲ ತೀರಕ್ಕೆ ಹೋಗದಂತೆ, ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇನ್ನು ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಹೇಳಿದೆ.

Heavy Rainfall Alert : Heavy rainfall with storm is likely in coastal districts for the next 5 days

Comments are closed.