Heavy Rainfall in Coastal : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 28ರವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಕಳೆದ ಮೂರು ನಾಲ್ಕು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ (Heavy Rainfall in Coastal) ವರುಣಾರ್ಭಟ ಜೋರಾಗಿದ್ದು, ಹಲವೆಡೆ ಜಲಾವೃತಗೊಂಡಿದೆ. ಇದರಿಂದಾಗಿ ನದಿ, ಹಳ್ಳಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಅಲ್ಲದೇ ಜುಲೈ 24, 28 ರವರೆಗೂ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಜಿಲ್ಲಾಡಳಿತ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

ಮಂಗಳೂರಿನಿಂದ ಕಾರವಾರದವರೆಗೆ ಕಡಲಿನ ಅಲೆಗಳ ಅಬ್ಬರವು ಜೋರಾಗಲಿದ್ದು, 3.5 ಯಿಂದ 4 ಮೀಟರ್‌ ಎತ್ತರದವರಗೂ ಅಲೆಗಳು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಕರಾವಳಿಯಾದ್ಯಂತ ಜುಲೈ 28ರವರೆಗೆ ಭಾರಿ ಮಳೆ ಆಗಲಿದೆ. ಈ ಭಾಗದಲ್ಲಿ ಬಿರುಗಾಳಿಯು ಗಂಟೆಗೆ 40 ರಿಂದ 50 ಕಿಲೋ ಮೀಟರ್‌ ವೇಗದಲ್ಲಿ ಬೀಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಸಮುದ್ರ ತೀರಕ್ಕೆ ಸ್ಥಳೀಯರು, ಪ್ರವಾಸಿಗರು ಹಾಗೂ ಮೀನುಗಾರರು ನೀರಿಗೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : School College holiday : ಭಾರೀ ಮಳೆ. ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಜುಲೈ 24 ರಂದು ರಜೆ : ಡಿಸಿ ವಿದ್ಯಾಕುಮಾರಿ ಆದೇಶ

ಇದನ್ನೂ ಓದಿ : Tomato Price : 3.5 ಲಕ್ಷ ರೂ. ಮೌಲ್ಯದ ಟೊಮ್ಯಾಟೊ ಕಳ್ಳತನ : ದಂಪತಿ ಬಂಧನ

ವಿಶೇಷವಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ. ನಂತರದ ದಿನಗಳಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ಯೆಲ್ಲೋ ಅಲರ್ಟ್‌ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy Rainfall in Coastal: Heavy rainfall is likely in the coastal districts of the state till July 28

Comments are closed.