Heavy Rainfall in Karnataka : ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ 13 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ (Heavy Rainfall in Karnataka) ಮಳೆರಾಯ ಕೊಂಚ ವಿರಾಮ ತೆಗೆದುಕೊಂಡಿದ್ದು, ಸತತ ಮಳೆಯಿಂದ ಸ್ವಲ್ಪ ಮಟ್ಟಿಗೆ ಮುಕ್ತಿ ಸಿಕ್ಕಿದಂತೆ ಆಗಿದೆ. ಆದರೆ ಹವಾಮಾನ ಇಲಾಖೆ ಪ್ರಕಾರ, ಮುಂದಿನ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಮಲೆನಾಡು ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ 13 ಜಿಲ್ಲೆಗಳಲ್ಲಿ ಒಳ್ಳೆಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಿದ್ದಾಪುರ ತಾಲೂಕಿನ ಹಲಗೇರಿ, ವಾಜಗೋಡು, ನೀಲಕುಂದ, ಬಿಳಗಿ, ಶಿವಳ್ಳಿ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ, ಸುಲಗೋಡು, ಸೋನಲೆ, ನೆರತೂರು, ತ್ರಿಣಿವೆ, ಅರಗ, ಬಿದರಗೋಡು, ಕೂಡುಮಲ್ಲಿಗೆ, ಚಿಕ್ಕಮಗಳೂರು ಜಿಲ್ಲೆಯ ಧಾರೆಕೊಪ್ಪ, ವಿದ್ಯಾರಣ್ಯಪುರ, ಬಣಕಲ್‌ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ : ಕೆದೂರಿನಲ್ಲಿ ಕೊರಗಜ್ಜನ ಪವಾಡ ! ನಿದ್ದೆ ಕಣ್ಣಲ್ಲಿ 3 ಕಿ.ಮೀ ನಡೆದು ಬಂದ ಮಗುವನ್ನು ರಕ್ಷಿಸಿದ ಯುವಕರು : Video

ಇದನ್ನೂ ಓದಿ : Gruha Lakshmi Scheme : ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಆರಂಭ : ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಇನ್ನೂ ನಾಲ್ಕು ದಿನ ಮುಂದುವರೆಯಲಿದೆ. 55 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಮುದ್ರದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆ ಇದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರಿಗೂ ಕೂಡ ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

Heavy Rainfall in Karnataka : Heavy rain is likely in 13 districts including coastal districts of the state

Comments are closed.