Heavy Rainfall in Karnataka : ಕರಾವಳಿ ಸೇರಿ‌ ರಾಜ್ಯದ ಹಲವೆಡೆ ಜುಲೈ 27 ರ ವರೆಗೆ ಭಾರೀ ಮಳೆ

ಬೆಂಗಳೂರು : ಕಳೆದ ಮೂರು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ (Heavy Rainfall in Karnataka) ಬಿರುಗಾಳಿ ಸಹಿತ ಜೋರಾದ ಮಳೆಯಾಗಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಸೇರಿದಂತೆ ಸುಮಾರು 14ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಜುಲೈ 27 ರವರೆಗೂ ಬಿರುಗಾಳಿ ಸಹಿತ ಜೋರಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಇಂದಿನಿಂದ ಜುಲೈ ೨೪ ರವರೆಗೂ ಭಾರೀ ಮಳೆಯಾಗಲಿದ್ದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಅಷ್ಟೇ ಅಲ್ಲದೇ ಗುಡುಗು, ಜೋರಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಲಾಗಿದೆ.

ಇಂದು ಕರಾವಳಿ ಜಿಲ್ಲೆಗಳಲ್ಲಿ 115 ರಿಂದ 204 ಮಿ.ಮೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಮತ್ತೆ ಹೆಚ್ಚಾಗಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವುದರಿಂದ ಸ್ಥಳೀಯರಿಗೆ, ಪ್ರವಾಸಿಗರಿಗೆ ಹಾಗೂ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಮುಂದಿನ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಕೂಡ ಇಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ : Udupi News : ಉಡುಪಿ : ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ “ಆರೋಗ್ಯ ಶನಿವಾರ”

ಇದನ್ನೂ ಓದಿ : ಕೆದೂರಿನಲ್ಲಿ ಕೊರಗಜ್ಜನ ಪವಾಡ ! ನಿದ್ದೆ ಕಣ್ಣಲ್ಲಿ 3 ಕಿ.ಮೀ ನಡೆದು ಬಂದ ಮಗುವನ್ನು ರಕ್ಷಿಸಿದ ಯುವಕರು : Video

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು ಜಿಲ್ಲೆಗೆ ಐದು ದಿನ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕೊಡಗು ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್‌ ನೀಡಿದ್ದು, ಇಂದು ಜುಲೈ 23 ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೂಡ ಐದು ದಿನಗಳು ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Heavy Rainfall in Karnataka: Heavy rain till July 27 in many parts of the state including the coast

Comments are closed.