Heavy Rainfall in Karnataka : ರಾಜ್ಯದ ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಜುಲೈ 16ರವರೆಗೂ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಕಳೆದ ವಾರವಿಡೀ ವರುಣನ ಆರ್ಭಟದಿಂದ ಹಲವು ಜಿಲ್ಲೆಗಳು ಜಲಾವೃತಗೊಂಡು (Heavy Rainfall in Karnataka) ಜೀವನ ಅಸ್ತವ್ಯಸ್ಥಗೊಂಡಿದೆ. ಆದರೆ ಕಳೆದ ಎರಡು ದಿನದಿಂದ ತಗ್ಗಿದ ಮಳೆಯಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ. ಮಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮಳೆ ಸರಿಯಾದ ಸಮಯಕ್ಕೆ ಬಾರದೇ ಇರುವುದಕ್ಕೆ ರೈತರು ಆತಂಕಕ್ಕೆ ಒಳಗಾಗಿದ್ದರು. ಸದ್ಯ ಮುಂಗಾರು ಮಳೆ ಚುರುಕುಗೊಂಡಿದ್ದರಿಂದ ಬೆಳೆಗಾರರು ನಿಶ್ಚಿಂತೆಯಿಂದ ಇರುವಂತೆ ಆಗಿದೆ. ಇನ್ನು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳ ನೀರು ತುಂಬಿಕೊಂಡು ನೆರೆಯಾಗಿರುತ್ತದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿತ್ತು.ಕಳೆದ ಎರಡು ದಿನಗಳವರೆಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತು. ಬಹುತೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಸಾಕಷ್ಟು ಕುಟುಂಬಗಳನ್ನು ಜಿಲ್ಲಾಡಳಿತಗಳು ಸ್ಥಳಾಂತರ ಮಾಡಿತ್ತು. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು.

ಇದನ್ನೂ ಓದಿ : Udupi News : ಬಾರಕೂರು : ಹ್ವಾಯ್ ಕೆಸ್ರ್ ಗದ್ದೆಗೆ ಹೋಪ ಕ್ರೀಡಾಕೂಟ : ಕೆಸರಲ್ಲಿ ಮಿಂದೆದ್ದ ಮಹಿಳೆಯರು

ಇದನ್ನೂ ಓದಿ : Coastal Crime News : ಮಂಗಳೂರು : ಕ್ಷುಲಕ ವಿಚಾರಕ್ಕೆ ಕಾರ್ಮಿಕನಿಗೆ ಬೆಂಕಿ ಹಚ್ಚಿ ಕೊಲೆ, ಮಾಲೀಕ ಅರೆಸ್ಟ್‌

ಕಳೆದೆರಡು ದಿನಗಳಿಂದ ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆರಾಯ ಕೊಂಚ ಬಿಡುವು ಕೊಟ್ಟಿದೆ. ಆದರೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಸೇರಿದಂತೆ ಕರಾವಳಿ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಇಂದು ಮಳೆಯಾಗಲಿದೆ ಎಂದಿದೆ. ನಾಳೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಜನರು ಎಚ್ಚರಿಕೆಯಿರುವಂತೆ ಸೂಚಿಸಲಾಗಿದೆ.

Heavy Rainfall in Karnataka: Heavy rainfall is likely till July 16 in these districts including the coast of the state

Comments are closed.