ಬೆಂಗಳೂರು: ಉಡುಪಿ ಜಿಲ್ಲೆಯಾದ್ಯಂತ (Heavy Rainfall in Udupi) ಮಳೆ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ (Minister Lakshmi Hebbalkar) ಹೇಳಿದರು. ಕಳೆದ ನಾಲ್ಕೈದು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ಜನರ ಜೀವನ ತತ್ತರಿಸಿ ಹೋಗಿದ್ದಾರೆ.
ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದದಲ್ಲಿ ಸಚಿವರು ಪಾಲ್ಗೊಂಡರು.
ಇದನ್ನೂ ಓದಿ : Karnataka Weather : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 29ವರೆಗೂ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ
ಬಳಿಕ ಮಾತನಾಡಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಮಳೆಯಿಂದ ಅನಾಹುತಗಳು ಸಂಭವಿಸುತ್ತಿವೆ. ಇನ್ಮುಂದೆ ಇಂಥ ಯಾವುದೇ ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು, ಶೀಘ್ರವೇ ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಸಚಿವರು ಹೇಳಿದರು.
Heavy Rainfall in Udupi: 28 crore loss due to rain in Udupi district: Minister Lakshmi Hebbalkar