ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮುಂದಿನ 5 ದಿನಗಳವರೆಗೆ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತವಾಗಿದ್ದು, ಗುಜರಾತ್ ಭಾಗದಲ್ಲಿನ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಗಾಳಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಮಳೆ ಭಾರೀ ಮಳೆ ಸುರಿಯುತ್ತಿದೆ. ಅದ್ರಲ್ಲೂ ಕರಾವಳಿ ಹಾಗೂ ಮಲೆನಾಡಿ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದೆ.

ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅಗಸ್ಟ್ 6 ರಿಂದ 9ರ ವರೆಗೆ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿತ್ತು.
ಆದ್ರೀಗ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ರೆ, ಗುಡ್ಡಪ್ರದೇಶಗಳಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.