Hijab Controversy : ಕುಂದಾಪುರ ಕಾಲೇಜಲ್ಲಿ ಕೇಸರಿ ಶಾಲು, ಹಿಜಾಬ್‌ ವಿವಾದ : ವಿಫಲವಾಯ್ತು ಶಾಸಕ, ಪೋಷಕರ ಸಭೆ

ಕುಂದಾಪುರ : ಕರಾವಳಿ ಭಾಗದ ಶಿಕ್ಷಣ ಸಂಸ್ಥೆಗಳಲ್ಲೀಗ ಹಿಜಾಬ್‌ ವಿವಾದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಉಡುಪಿ ಮಹಿಳಾ ಕಾಲೇಜಿನಲ್ಲಿ ಹಿಜಾಬ್‌ ವಿವಾದದ (Hijab Controversy ) ಬೆನ್ನಲ್ಲೇ, ಇದೀಗ ಕುಂದಾಪುರ ಜೂನಿಯರ್‌ ಕಾಲೇಜಿನಲ್ಲೂ ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ಬುಗಿಲೆದ್ದಿದೆ.

ಉಡುಪಿ ಮಹಿಳಾ ಕಾಲೇಜಿನಲ್ಲಿ ಆರಂಭಗೊಂಡಿದ್ದ ಹಿಜಾಬ್‌ ವಿವಾದ ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ. ಇದರ ಬೆನ್ನಲ್ಲೇ ಕುಂದಾಪುರ ಜೂನಿಯರ್‌ ಕಾಲೇಜಿನಲ್ಲಿ 29 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ತರಗತಿಗೆ ಹಾಜರಾಗಿದ್ದಾರೆ. ಇದರ ಬೆನ್ನಲ್ಲೇ 40ಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ. ಇದರಿಂದಾಗಿ ಕುಂದಾಪುರದಲ್ಲಿ ವಿವಾದ ಹುಟ್ಟುಕೊಂಡಿತ್ತು.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ನೇತೃತ್ವದಲ್ಲಿ ಪೋಷಕರ ಸಭೆ ನಡೆದಿದೆ. ಸಭೆಯಲ್ಲಿ ಹಿಜಾಬ್‌ ಧರಿಸಿ ಬರುವುದನ್ನು ಪೋಷಕರು ಸಮರ್ಥಿಸಿಕೊಂಡಿದ್ದಾರೆ. ಆದರೆ ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಕಾಲೇಜಿನಲ್ಲಿ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಶಾಸಕರು ಸೂಚಿಸಿದ್ದಾರೆ. ಆದರೂ ಸಂಧಾನ ಸಭೆ ಯಾವುದೇ ರೀತಿಯಲ್ಲೂ ಯಶಸ್ಸು ಕಾಣಲಿಲ್ಲ. ಈ ವೇಳೆಯಲ್ಲಿಯೇ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಕರೆ ಮಾಡಿದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಘಟನೆಯ ವಿವರಣೆಯನ್ನು ನೀಡಿದ್ದಾರೆ. ಆದರೆ ಸಚಿವರು ಕಡ್ಡಾಯವಾಗಿ ವಿದ್ಯಾರ್ಥಿನಿಯರು ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು ಎಂದು ಸೂಚನೆ ನೀಡಿದ್ದಾರೆ.

ಕಾಲೇಜಿನಲ್ಲಿ ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲನೆ ಮಾಡಬೇಕು. ಸಮವಸ್ತ್ರ ಹೊರತು ಪಡಿಸಿ ಉಳಿದ ಯಾವುದೇ ಬಟ್ಟೆಗಳನ್ನು ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲ. ಪಿಯುಸಿ ವಿದ್ಯಾರ್ಥಿಗಳಿಂದಾಗಿ ಕಾಲೇಜಿನಲ್ಲಿ ಹಿಜಾಬ್‌ ಸಮಸ್ಯೆ ತಲೆದೊರಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳಿಂದ ಉಂಟಾಗಿರುವ ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ಇದೀಗ ಕುಂದಾಪುರದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗುವಂತೆ ಮಾಡಿದೆ. ಬಡ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶಿಕ್ಷಣ ನೀಡುವ ಸಲುವಾಗಿ ಕಾಲೇಜನ್ನು ಸರ್ವ ರೀತಿಯಲ್ಲಿಯೂ ಅಭಿವೃದ್ದಿ ಮಾಡುತ್ತಿದ್ದೇವೆ. ವಿದ್ಯಾರ್ಥಿಗಳು ಶಾಲೆಯ ಶಿಸ್ತನ್ನು ಪಾಲನೆ ಮಾಡಬೇಕು ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರಿಗೆ ಸೂಚನೆಯನ್ನು ನೀಡಲಾಗಿದ್ದು, ಕುಂದಾಪುರ ಪೊಲೀಸರು ಈ ಕುರಿತು ತನಿಖೆಯನ್ನು ಆರಂಭಿಸಿದ್ದಾರೆ.

ಇದನ್ನೂ ಓದಿ : ಕೆಜಿಎಫ್-2 ರಿಲೀಸ್ ಗೂ ಮುನ್ನ ಬಸ್ರೂರಿನಲ್ಲಿ ಕ್ರಿಕೆಟ್‌ ಆಡಿದ ಯಶ್ : ಹೇಗಿತ್ತು ಗೊತ್ತಾ ರಾಕಿಂಗ್‌ ಸ್ಟಾರ್‌ ಬ್ಯಾಟಿಂಗ್‌

ಇದನ್ನೂ ಓದಿ : ಕುಂದಾಪುರ : ಗಂಡನ ಬಿಟ್ಟು ಪ್ರಿಯಕರನ ಜೊತೆಗೆ ಎಸ್ಕೇಪ್‌ ಆದ 2 ಮಕ್ಕಳ ತಾಯಿ

ಇದನ್ನೂ ಓದಿ : ಬಾರಕೂರಲ್ಲಿ ವಿವೇಕಾನಂದ ಜಯಂತಿ ಆಚರಣೆಗೆ ಉಪನ್ಯಾಸಕಿ ವಿರೋಧ : ಪೊಲೀಸರಿಗೆ ದೂರು

( Hijab Controversy at Government College Kundapur )

Comments are closed.