ಮಂಗಳೂರು : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಅವಾಂತರವನ್ನೇ ಸೃಷ್ಟಿಸುತ್ತಿದೆ. ಇದೀಗ ಮಳೆಯಿಂದಾಗಿ ಗುಡ್ಡ ಕುಸಿದು ಮನೆಯೊಂದು ಜಖಂ ಗೊಂಡಿದೆ. ಅಲ್ಲದೇ ಮಹಿಳೆಯೋರ್ವರಿಗೆ ಗಂಭೀರ ಗಾಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮಲ್ಲಾರು ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ ೫.೩೦ರ ಸುಮಾರಿಗೆ ಇಲ್ಲಿನ ಝಬೈರ್ ಎಂಬವರ ಮನೆಯಲ್ಲಿ ಈ ಘಟನೆ ಸಂಭವಿಸಿವೆ. ಬೀಪಾತುಮ್ಮ ಅವರು ಗಾಯಗೊಂಡಿದ್ದಾರೆ.
ರಾತ್ರಿಯ ವೇಳೆಯಲ್ಲಿ ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ಗುಡ್ಡ ಮಣ್ಣು ಸಡಿಲವಾಗಿದ್ದುಈ ಘಟನೆ ಸಂಭವಿಸಿದೆ. ಭಾರೀ ಪ್ರಮಾಣದ ಗುಡ್ಡ ಮಣ್ಣು ಮನೆಯ ಮೇಲೆ ಬಿದ್ದ ಹಿನ್ನೆಲೆಯಲ್ಲಿ ಗೋಡೆ ಕುಸಿತವಾಗಿದ್ದು, ಮನೆಗೆ ಹಾನಿಯುಂಟಾಗಿದೆ.