illegal liquor Sale: ಉಡುಪಿಯಲ್ಲಿ ಅಕ್ರಮ ಮಧ್ಯ ಮಾರಾಟ: ನಾಲ್ವರು ವಶಕ್ಕೆ

ಉಡುಪಿ: (illegal liquor Sale) ಉಡುಪಿಯ ಹಳೇ ಕೆ.ಎಸ್. ಆರ್.ಟಿ.ಸಿ ಬಸ್‌ ನಿಲ್ದಾಣ ಹಾಗೂ ಹಳೇ ಮೀನು ಮಾರುಕಟ್ಟೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮೂರು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕುಂದಾಪುರದ ರಾಘವೇಂದ್ರ( ೩೧ ವರ್ಷ), ಉಡುಪಿಯ ಪ್ರವೀಣ್‌ ಶೇರಿಗಾರ್‌ (೪೨ ವರ್ಷ), ಪೇರ್ಡೂರಿನ ಜಯಪ್ರಕಾಶ್‌ ಶೆಟ್ಟಿ( ೪೫ ವರ್ಷ), ಉಡುಪಿ ಸತೀಶ್‌ ಶೆಟ್ಟಿ (೬೨ ವರ್ಷ) ಬಂಧಿತ ಆರೋಪಿಗಳು. ಅಕ್ರಮ ಮಧ್ಯ ಮಾರಾಟ(illegal liquor Sale)ದ ಖಚಿತ ಮಾಹಿತಿ ಪಡೆದ ಉಡುಪಿ ನಗರ ಠಾಣೆಯ ಪೊಲೀಸರು ನಗರದ ಹಳೇ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ಹಾಗೂ ಬೀಡಿನಗುಡ್ಡೆ ಹಳೇ ಮೀನು ಮಾರುಕಟ್ಟೆ ಬಳಿಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ನಾಲ್ವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಲ್ಲದೇ ಇವರಿಂದ ಒಟ್ಟು ೩೧,೩೦೦ ರೂ. ಮೌಲ್ಯದ ವಿವಿಧ ಬ್ರಾಂಡ್‌ ನ ಮದ್ಯ ಹಾಗೂ ೫೫೩೦ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Wikipedia QR. Code: ಪ್ರವಾಸಿ ತಾಣಗಳ ಮಾಹಿತಿಗೆ ಇನ್ಮುಂದೆ ಕ್ಯೂ. ಆರ್.ಕೋಡ್‌: ಉಡುಪಿ ಡಿಸಿ ಕೂರ್ಮರಾವ್‌ ಎಂ

ಇದನ್ನೂ ಓದಿ : Lokayukta Justice BS Patil: ಧರ್ಮಸ್ಥಳ ಭೇಟಿ ನೀಡಿದ ಲೋಕಾಯಕ್ತ ನ್ಯಾಯಮೂರ್ತಿ: ದೇವರ ದರ್ಶನ ಬಳಿಕ ಧರ್ಮಾಧಿಕಾರಿ ಭೇಟಿ

ಇದನ್ನೂ ಓದಿ : Congress New formula : 2 ಬಂಟ, 2 ಬಿಲ್ಲವ, 2 ಮುಸ್ಲೀಂ,1 ಕ್ರಿಶ್ಚಿಯನ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಹೊಸ ಸೂತ್ರ

ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ವ್ಯಾಪಕವಾಗಿ ನಡೆಯುತ್ತಿರುವ ಬಗ್ಗೆ ಹೆಚ್ಚು ದೂರುಗಳು ಕೇಳಿಬರುತ್ತಿವೆ. ಪೊಲೀಸ್‌ ಮತ್ತು ಅಬಕಾರಿ ಇಲಾಖೆಗಳಿ ಆಗಾಗ್ಗೆ ದಾಳ ನಡೆಸಿ ಪ್ರಕರಣ ದಾಖಲಿಸಿದರೂ ಅಕ್ರಮ ಮದ್ಯ ಮಾರಾಟಕ್ಕೆ ಕೊನೆ ಇಲ್ಲದಂತಾಗಿದೆ. ಇನ್ನೂ ಕೆಲವು ಗೂಡಂಗಡಿ, ಸಣ್ಣಪುಟ್ಟ ಹೋಟೆಲ್‌ ಗಳು, ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟದ ಕೇಂದ್ರವನ್ನಾಗಿ ಮಾಡಿಕೊಂಡಿದ್ದಾರೆ. ಹೊರ ಜಿಲ್ಲೆಗೆ ಹೋಲಿಸಿದರೆ ಉಡುಪಿಯಲ್ಲಿ ಅಕ್ರಮ ಮದ್ಯ ಮಾರಾಟದ ಪ್ರಮಾಣ ಕಡಿಮೆ.

Illegal Liquor Sale: Illegal Liquor Sale in Udupi: Four Arrested

Comments are closed.