School College holiday : ಭಾರೀ ಮಳೆ. ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಜುಲೈ 24 ರಂದು ರಜೆ : ಡಿಸಿ ವಿದ್ಯಾಕುಮಾರಿ ಆದೇಶ

ಉಡುಪಿ : School College holiday : ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜುಲೈ 24 ರಂದು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದಲೂ ಭಾರೀ ಮಳೆ ಸುರಿಯತ್ತಿದೆ. ಇದರಿಂದಾಗಿ ನದಿ, ಹಳ್ಳಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಅಲ್ಲದೇ ಜುಲೈ 24, 25 ರಂದು ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

ಉರುಳಿಬಿದ್ದ ಮರಗಳು, ಮನೆಗಳಿಗೆ ಹಾನಿ :
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಗಾಳಿ, ಮಳೆಯಿಂದಾಗಿ ಬಹುತೇಕ ಕಡೆಗಳಲ್ಲಿ ಮರಗಳು ಉರುಳಿ ಬಿದ್ದಿದ್ದು, ಮನೆಗಳಿಗೆ ಹಾನಿಯಾಗಿದೆ. ವಿದ್ಯುತ್‌ ಕಂಬಗಳು ಮುರಿದು ಬಿದ್ದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಅಲ್ಲದೇ ಹಲವು ಕಡೆಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇನ್ನು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿಯ ಪರ್ಕಳದ ದೇವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತ ನೆರೆ ಸೃಷ್ಟಿಯಾಗಿದೆ. ಸದ್ಯ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದರೂ ಕೂಡ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : Education News : ಉಡುಪಿ : ಪ್ರವೇಶ ಪರೀಕ್ಷೆ ಬರೆಯದೇ ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ ಪ್ರವೇಶಾತಿ: ಅರ್ಜಿ ಆಹ್ವಾನ

ಇದನ್ನೂ ಓದಿ : Heavy Rainfall in Karnataka : ಕರಾವಳಿ ಸೇರಿ‌ ರಾಜ್ಯದ ಹಲವೆಡೆ ಜುಲೈ 27 ರ ವರೆಗೆ ಭಾರೀ ಮಳೆ

Comments are closed.