Independence Day 2023 : ಉಡುಪಿ : ಜಿಲ್ಲಾ ಮಟ್ಟದ ಸ್ವಾತಂತ್ರ್ಯೊತ್ಸದ ಧ್ವಜಾರೋಹಣ ನೆರವೇರಿಸಲಿದ್ದಾರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ : ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಸ್ವಾತಂತ್ರ್ಯೊತ್ಸವ ದಿನಾಚರಣೆ (Independence Day 2023) ಕಾರ್ಯಕ್ರಮವು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೊತ್ಸವದ ಸಂದೇಶ ನೀಡಲಿದ್ದು, ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ : Heart Attack : ಮಂಗಳೂರು : ಹೃದಯಾಘಾತದಿಂದ ನರ್ಸಿಂಗ್‌ ವಿದ್ಯಾರ್ಥಿನಿ ಸಾವು

ಇದನ್ನೂ ಓದಿ : Karnataka Weather : ಆಗಸ್ಟ್ 19 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ವರದಿ

ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರಿ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

Independence Day 2023: Udupi: Minister Lakshmi Hebbalkar will hoist the district level Independence Day flag.

Comments are closed.