Karavali Rains: ಕರಾವಳಿಯಲ್ಲಿ ಭಾರೀ ಮಳೆ : ರಾಜ್ಯದಲ್ಲಿ 2ದಿನ ಮಳೆ ಮುಂದುವರಿಕೆ

ಬೆಂಗಳೂರು: (Karavali Rains) ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದಲೂ ರಾತ್ರಿಯ ಹೊತ್ತಲ್ಲಿ ಭಾರೀ ಮಳೆ ಸುರಿಯುತ್ತಿದೆ. ನಿನ್ನೆ ರಾತ್ರಿಯೂ ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ (Karavali Rains) ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿನ್ನೆ ಭಾರೀ ಮಳೆಯಾಗಿದ್ದು, ಇನ್ನೆರಡು ದಿನ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳವರೆಗೂ ಮಳೆ ಮುಂದುವರಿಯಲಿದೆ.ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಇಂದು ಕೂಡ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ರಾಜ್ಯದ 25 ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ರಾಜ್ಯದ ಕೆಲವು ಪ್ರದೇಶಗಳಲ್ಲಿ ಬೆಳಗ್ಗಿನ ಜಾವ ಮಂಜು ಕವಿಯುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದೆ.

ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಮತ್ತು ಹಾಸನದ ಗುಡ್ಡ ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ. ಅದೇ ರೀತಿ ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : Karnataka weather report today: ರಾಜ್ಯದಲ್ಲಿ ನ. 27ರ ವರೆಗೆ ಬಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕರ್ನಾಟಕ, ಕೇರಳ ಸೇರಿದಂತೆ ಕೆಲವು ರಾಜ್ಯದಲ್ಲಿ ಮಿಂಚು ಸಹಿತ ಮಳೆಯಾಗಲಿದೆ.

(Karavali Rains) It has been raining heavily during the night since the last two days on the coastal side. Last night too there was thunder and lightning rain in most parts of Udupi district. Rain is likely to continue for the next two days. Heavy rains are likely to occur in many districts of Karnataka due to depression of air pressure in Bay of Bengal and surface cyclone over Tamil Nadu coast, said the Meteorological Department.

Comments are closed.