Karnataka Weather Updates : ರಾಜ್ಯದಲ್ಲಿ 3 ದಿನ ಭಾರೀ ಮಳೆ : 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದಲೂ ಮಳೆ ಸುರಿಯುತ್ತಿದೆ. ಇದೀಗ ಸಪ್ಟೆಂಬರ್‌ 15ರ ವರೆಗೂ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಅದ್ರಲ್ಲೂ ಕರ್ನಾಟಕದ 7 ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಇನ್ನೂ ಮೂರು ದಿನಗಳ ಕಾಲ ಮುಂದುವರಿ ಯಲಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಪ್ಟೆಂಬರ್‌ 15ರ ವರೆಗೆ ಮಳೆಯಾಗಲಿದೆ ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಸ್ವಂತ ಮನೆ ಕನಸು ಕಂಡಿದ್ದಿರಾ ? ಹಾಗಾದ್ರೆ ನಿಮಗಿದೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಇದನ್ನೂ ಓದಿ : ಕೋವಿಡ್, ಡೆಲ್ಟಾ ನಡುವೆ ಆತಂಕ ಮೂಡಿಸಿದ ಡೆಂಗ್ಯೂ : ರಾಜ್ಯದಲ್ಲಿ 2,736 ಜನರಲ್ಲಿ ಸೋಂಕು ಪತ್ತೆ

(Karnataka Weather Report : Heavy rain in three days: Yellow Alert in 7 districts)

Comments are closed.