ಮಂಗಳವಾರ, ಏಪ್ರಿಲ್ 29, 2025
HomeCoastal NewsMudbidri : ಮೂಡಬಿದಿರೆ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಯತ್ನ

Mudbidri : ಮೂಡಬಿದಿರೆ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಯತ್ನ

- Advertisement -

ಮೂಡಬಿದಿರೆ : ವಿದ್ಯಾರ್ಥಿಯೋರ್ವ ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್‌ ಕಾಲೇಜು ಹಾಸ್ಟೆಲ್‌ನಲ್ಲಿ ನಡೆದಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಬೆಳಗಾವಿ ಮೂಲದ ರಜತ್‌ ಸುರೇಶ್‌ ಪಟ್ಟದ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿರುವ ವಿದ್ಯಾರ್ಥಿಯಾಗಿದ್ದಾರೆ. ಸದ್ಯ ವಿದ್ಯಾರ್ಥಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ನಿನ್ನೆ ಸಂಜೆ ಆರು ಗಂಟೆಯ ಸುಮಾರಿಗೆ ಕಾಲೇಜಿನಿಂದ ಹಾಸ್ಟೆಲ್‌ಗೆ ಬಂದಿದ್ದಾನೆ. ನಂತರ ಸ್ವಲ್ಪ ಹೊತ್ತಲೇ ಕಾಲೇಜಿಗೆ ಮರಳಿ ಬಂದ, ವಿದ್ಯಾರ್ಥಿ ಏಕಾಏಕಿಯಾಗಿ ಕಾಲೇಜು ಕಟ್ಟಡ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ವಿದ್ಯಾರ್ಥಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ. ಆತ್ಮಹತ್ಯೆಗೆ ಯತ್ನಿಸುವ ಮೊದಲು ಮನೆಯವರಿಗೆ ಕರೆ ಮಾಡಿ ಮಾತನಾಡಿದ್ದಾನೆ. ನಂತರದಲ್ಲಿ ಕಾಲೇಜು ಕಟ್ಟಡದಿಂದ ಜಿಗಿದಿದ್ದಾನೆ. ಆತ್ಮಹತ್ಯೆ ಯತ್ನಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಮೂಡಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿನಿ ಸೇರಿ 6 ಜನರ ಬಂಧನ

ಇದನ್ನೂ ಓದಿ : ದಕ್ಷಿಣ ಕನ್ನಡದಲ್ಲಿ ಶಾಲಾರಂಭಕ್ಕೆ ಗ್ರೀನ್‌ಸಿಗ್ನಲ್‌

(Student committing suicide by jumping out of Alva’s college hostel in Mudbidri )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular