ಉಡುಪಿ : ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಶಿಕ್ಷಕಿ ಉಷಾ ಸಾವು : ಆಸ್ಪತ್ರೆ ಮುಂಭಾಗ ಕುಟುಂಬಸ್ಥರ ಆಕ್ರೋಶ

ಉಡುಪಿ : ವೈದ್ಯರ ನಿರ್ಲಕ್ಷಕ್ಕೆ ಹೆರಿಗೆಯಾದ ಬೆನ್ನಲ್ಲೇ ಬಾಣಂತಿ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಇದೀಗ ಆಕ್ರೋಶ ಗೊಂಡಿರುವ ಮೃತರ ಕುಟುಂಬಸ್ಥರು ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೋಟ ನಿವಾಸಿಯಾಗಿರುವ ಉಷಾ (26 ವರ್ಷ) ಎಂಬವರೇ ಮೃತ ಗರ್ಭಿಣಿ. ಕೋಟೇಶ್ವರದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಉಷಾ, ಸಪ್ಟೆಂಬರ್‌ 23 ರಂದು ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆಯನ್ನು ಮಾಡಿಸಲಾಗಿತ್ತು. ಉಷಾ ಅವರಿಗೆ ಗಂಡು ಮಗು ಜನಿಸಿತ್ತು. ಹೆರಿಗೆಯ ನಂತರದಲ್ಲಿ ತಾಯಿಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಹೀಗಾಗಿ ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಉಷಾ ಮೃತಪಟ್ಟಿದ್ದಾರೆ.

ಉಷಾ ಅವರ ಸಾವಿಗೆ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ಕುಟುಂಬಸ್ಥರು ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದು, ತಪ್ಪಿತಸ್ಥರ ವೈದ್ಯರ ವಿರುದ್ದ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

ಇನ್ನು ಸ್ಥಳಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ಭೇಟಿಯನ್ನು ನೀಡಿದ್ದಾರೆ. ಅಲ್ಲದೇ ಸ್ಥಳಕ್ಕೆ ಭೇಟಿ ಕೊಟ್ಟ ಜಿಲ್ಲಾ ಸರ್ಜನ್‌ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳು, ಹೆರಿಗೆಯ ನಂತರದಲ್ಲಿ ಮಹಿಳೆಗೆ ಮೂರ್ಛೆ ರೋಗ ಕಾಣಿಸಿಕೊಂಡಿದ್ದು, ಕೂಡಲೇ ಅವರಿಗೆ ಚಿಕಿತ್ಸೆಯನ್ನು ನೀಡಿದ್ದೇವೆ. ಆದರೆ ಚಿಕಿತ್ಸೆ ಸ್ಪಂದಿಸಿಲ್ಲ ಅನ್ನೋ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಕುಟುಂಬಸ್ಥರು ವೈದ್ಯಾಧಿಕಾರಿಗಳ ಹೇಳಿಕೆಯನ್ನು ಒಪ್ಪುವುದಕ್ಕೆ ಸಿದ್ದರಿಲ್ಲ.

ಸರಕಾರಿ ಹೆರಿಗೆ ಆಸ್ಪತ್ರೆಗೆ ಉಷಾ ಅವರನ್ನು ದಾಖಲು ಮಾಡಿದ ನಂತರದಲ್ಲಿ ಆಸ್ಪತ್ರೆಯಲ್ಲಿನ ವೈದ್ಯಾಧಿಕಾರಿಗಳು ಸರಿಯಾಗಿ ಚಿಕಿತ್ಸೆಯನ್ನು ನೀಡಿಲ್ಲವೆಂಬ ಆರೋಪ ಕೇಳಿಬಂದಿದೆ. ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಇಂತಹ ಘಟನೆಗಳು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಪ್ರಕರಣಗಳು ನಡೆದಿವೆ. ಆದರೆ ಜನಪ್ರತಿನಿಧಿಗಳು ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳುತ್ತಿಲ್ಲ ಅನ್ನೋ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಉಡುಪಿ ಜಿಲ್ಲೆಯಲ್ಲಿ ಬಾಣಂತಿ ಹಾಗೂ ಗರ್ಭಿಣಿಯರ ಸಾವಿನ ಪ್ರಕರಣ ಹೆಚ್ಚುತ್ತಿದೆ. ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಇಂತಹ ಪ್ರಕರಣ ಪದೇ ಪದೇ ಮರುಕಳಿಸುತ್ತಿದ್ದರೂ ಕೂಡ ಸರಕಾರ ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ. ಇನ್ನೊಂದೆಡೆಯಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸುವ ವೈದ್ಯರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕೆಂಬ ಆಗ್ರಹ ಕೇಳಿಬರುತ್ತಿದೆ.

ಇದನ್ನೂ ಓದಿ : ಬಾನಲ್ಲೇ ಮಧುಚಂದ್ರಕೆ, ಯುಗಪುರುಷ ಸಿನಿಮಾ ಶೈಲಿಯಲ್ಲಿ ಪತ್ನಿಯ ಕೊಲೆ ಯತ್ನ ! ಕೊನೆಗೆ ಚಾಕುವಿನಿಂದ ಇರಿದು ಕೊಲೆ

ಇದನ್ನೂ ಓದಿ : ವಿಶಾಲ ಗಾಣಿಗ ಕೊಲೆ ಪ್ರಕರಣ : ಪೊಲೀಸರಿಗೆ 50 ಸಾವಿರ ಬಹುಮಾನ, ಅಭಿನಂದನೆ

ಇದನ್ನೂ ಓದಿ : Karkala : ನೀರು ಎಂದು ಆಸಿಡ್‌ ಕುಡಿದ ಯುವತಿ ! ಕ್ಯಾಶ್ಯೂ ಫಾಕ್ಟರಿ ಮಾಲೀಕನ ವಿರುದ್ದ ದಾಖಲಾಯ್ತು ದೂರು

ಇದನ್ನೂ ಓದಿ : ತ್ಯಾಜ್ಯಮುಕ್ತ ಮಲ್ಪೆ ಬೀಚ್‌ ಪಣತೊಟ್ಟ ಯುವಬ್ರಿಗೆಡ್‌ : ನಿತ್ಯವೂ ಟನ್‌ಗಟ್ಟಲೆ ಕಸ ಸಂಗ್ರಹ

( Udupi: Doctors negligence teacher death after delivery: hospital front family Protest )

Comments are closed.