Karnataka Rains : ನಾಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ : ಹವಾಮಾನ ವರದಿ

ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆರಾಯನ (Karnataka Rains) ಆರ್ಭಟ ಕೊಂಚ ತಗ್ಗಿದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಮುನ್ನಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟದಿಂದ ಕಳೆದ ವಾರ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಕ್ರಮವಾಗಿ ನಾಲ್ಕು ದಿನಗಳ ಕಾಲ ರಜೆ ನೀಡಲಾಗಿತ್ತು.

ಕಳೆದ ವಾರ ಬಿಟ್ಟು ಬಿಡದೇ ಸುರಿದ ಮಳೆಯು, ಎರಡು ದಿನಗಳ ಕಾಲ ಕೊಂಚ ಬಿಡುವು ಕೊಟ್ಟಿದೆ. ಶಾಂತವಾಗಿರುವ ವರುಣದೇವ ಮತ್ತೆ ನಾಳೆಯಿಂದ ಅಬ್ಬರಿಸಲಿದ್ದಾನೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜುಲೈ 31 ರಿಂದ ಆಗಸ್ಟ್‌ 3ರವರೆಗೂ 6 ರಿಂದ 11 ಸೆಂ.ಮೀ. ವರೆಗೂ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : Udupi College Toilet Video Case : ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣ : 3 ವಿದ್ಯಾರ್ಥಿನಿಯರಿಗೆ ಷರತ್ತು ಬದ್ದ ಜಾಮೀನು

ಇದನ್ನೂ ಓದಿ : Udupi College Toilet Video Case : ಉಡುಪಿ : ಕಾಲೇಜು ಶೌಚಾಲಯದಲ್ಲಿ ವಿಡಿಯೋ ಪ್ರಕರಣ : ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸಿನ ಜಿಲ್ಲೆಗಳಲ್ಲಿ ಆಗಸ್ಟ್‌ 3ಕ್ಕೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಇನ್ನುಳಿದಂತೆ ದಕ್ಷಿಣ ಒಳನಾಡಿನ ಭಾಗದಲ್ಲಿ ಮೋಡ ಮುಸುಕಿದ ವಾತಾವರಣದಿಂದ ಕೂಡಿದ್ದು, ಸಾಧಾರಣ ಮಳೆಯಾಗಲಿದೆ. ಇನ್ನೂ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿಯೂ ಇದೇ ವಾತಾವರಣ ಮುಂದುವರೆಯಲಿದೆ.

Karnataka Rains: Heavy rain likely in coastal districts from tomorrow: Weather report

Comments are closed.