Karnataka Weather : ಆಗಸ್ಟ್ 19 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ವರದಿ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ (Karnataka Weather) ಮುಂಗಾರು ಮಳೆ ಕ್ಷೀಣವಾಗಿದೆ. ಭಾರತೀಯ ಹವಾಮಾನ ಇಲಾಖೆ ವರದಿ ಪ್ರಕಾರ, ಆಗಸ್ಟ್ 19 ರವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬಸವನ ಬಾಗೇವಾಡಿ, ಪೊನ್ನಂಪೇಟೆ, ಗಬ್ಬೂರು, ಸತ್ತೂರು, ಹರದನಹಳ್ಳಿ, ಕ್ಯಾಸಲ್‌ರಾಕ್, ದೇವದುರ್ಗ, ಕಕ್ಕರಿ, ವಿಜಯಪುರದಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ, ಕರಾವಳಿಯ ಕೆಲವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ : SEIKO KAI KARATE INTERNATIONAL 2023: ಕುಂದಾಪುರದ ಶ್ರೀಶ ಗುಡ್ರಿಗೆ ಚಿನ್ನದ ಪದಕ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತಾಪಮಾನ ಹೆಚ್ಚಿದ್ದು, ಬೆಳಗ್ಗೆಯಿಂದಲೇ ಬಿಸಿಲಿನ ಝಳವಿದೆ. ಎಚ್ ಎಎಲ್ ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಕೆಐಎಎಲ್ ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: Heavy Rain Alert in coastal districts till August 19

Comments are closed.