Karnataka Weather : ವಾರಾಂತ್ಯದಲ್ಲಿ ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ (Karnataka Weather) ವಾರವಿಡೀ ಸುರಿದ ಮಳೆ, ನಿನ್ನೆಯಿಂದ ಕೊಂಚ ಬಿಡುವು ತೆಗೆದುಕೊಂಡಿದೆ. ಹವಾಮಾನ ಇಲಾಖೆ ವರದಿ ಪ್ರಕಾರ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ರಾತ್ರಿ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬೇರ್ಕಾಡಿ ಎನ್ನುವಲ್ಲಿ 111.5ಮಿ.ಮೀ ಮಳೆಯಾಗಿದ್ದು, ರಾಜ್ಯದಲ್ಲಿ ಅಧಿಕ ಮಳೆಯಾಗಿರುವ ಸ್ಥಳವಾಗಿದೆ. ಇನ್ನುಳಿದಂತೆ ಕೆರಗಾಳು, ಹಾರಾಡಿ, ಉಪ್ಪೂರು, ಮಡಮಕ್ಕಿ, ಹೆಂಗವಳ್ಳಿಯಲ್ಲಿ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ : Udupi College Toilet Video Case : ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣ : 3 ವಿದ್ಯಾರ್ಥಿನಿಯರಿಗೆ ಷರತ್ತು ಬದ್ದ ಜಾಮೀನು

ಇದನ್ನೂ ಓದಿ : Udupi College Toilet Video Case : ಉಡುಪಿ : ಕಾಲೇಜು ಶೌಚಾಲಯದಲ್ಲಿ ವಿಡಿಯೋ ಪ್ರಕರಣ : ಬಿಜೆಪಿಯಿಂದ ಬೃಹತ್ ಪ್ರತಿಭಟನೆ

“ಜುಲೈ 28 ರಿಂದ 30 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಕರಾವಳಿ ಭಾಗದ ಸ್ಥಳೀಯರು, ಪ್ರವಾಸಿಗರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ನದಿ, ಗುಡ್ಡ ಹಾಗೂ ಜಲಪಾತಕ್ಕೆ ಪ್ರವಾಸಿಗರು ಹೋಗುವ ಸಾಹಸ ಮಾಡಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

Karnataka Weather : Heavy rain is likely in these districts including the coast during the weekend

Comments are closed.