ಬೆಂಗಳೂರು : ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಸೇರಿದಂತೆ (Karnataka Weather) ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜನರು ಹೈರಾಣಾಗಿದ್ದರು. ಸತತವಾಗಿ ಮಳೆ ಸುರಿಯುತ್ತಿದ್ದರಿಂದ ಜನರು ಒಂದು ಘಳಿಗೆಯಾದರೂ ಮಳೆ ಬಿಟ್ಟರೆ ಸಾಕು ಎನ್ನುವಂತೆ ಕಾಯುವಂತೆ ಆಗಿತು. ನಿನ್ನೆಯಿಂದ ಮಳೆರಾಯ ಕೊಂಚ ಬಿಡುವು ತೆಗೆದುಕೊಂಡಿದ್ದು, ನಾಲ್ಕೈದು ದಿನದಿಂದ ಶಾಲೆಗೆ ರಜೆಯಿಂದ ಮನೆಯಲ್ಲಿ ಇದ್ದ ಮಕ್ಕಳು ಶಾಲೆಯತ್ತ ಮುಖ ಮಾಡಿದ್ದಾರೆ.
ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಾತ್ರ ಮಳೆಯ ಆರ್ಭಟ ಜೋರಾಗಿದೆ. ಉಳಿದ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಹಾಗೆಯೇ ನಿನ್ನೆಯವರೆಗೂ ಕೆಲವು ಕಡೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆದರೆ, ಶುಕ್ರವಾರ ದಕ್ಷಿಣ ಒಳನಾಡಿನ ಯಾವುದೇ ಜಿಲ್ಲೆಗಳಿಗೆ ಎಚ್ಚರಿಕೆ ಅಲರ್ಟ್ ನೀಡಿರುವುದಿಲ್ಲ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ನಿನ್ನೆ ಬೆಳಗಿನವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಎಂಬ ಮೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯ ಆರೆಂಜ್ ಅಲರ್ಟ್ ಮತ್ತು ಹಳದಿ ಅಲರ್ಟ್ ಅನ್ನು ಸಹ ನೀಡಿದೆ. ಹವಾಮಾನ ಇಲಾಖೆ ಬೆಳಗಾವಿ, ಚಿಕ್ಕಮಗಳೂರು ಮತ್ತು ಕೊಡಗಿಗೆ ಆರೆಂಜ್ ಅಲರ್ಟ್ ಮತ್ತು ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಹಾಸನ ಮತ್ತು ಶಿವಮೊಗ್ಗದಲ್ಲಿ ಹಳದಿ ಅಲರ್ಟ್ ಅನ್ನು ಗುರುವಾರ ಬೆಳಗಿನವರೆಗೆ ಘೋಷಿಸಿದೆ.
ಇದನ್ನೂ ಓದಿ : Heavy Rainfall in Udupi : ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ 28 ಕೋಟಿ ನಷ್ಟ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜುಲೈ 26 ರಿಂದ 27 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗವನ್ನು ತಲುಪುವ ಗಾಳಿ ಬೀಸುವ ಸಾಧ್ಯತೆಯಿದೆ ಮತ್ತು ಜುಲೈ 28 ರಿಂದ 30 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 26 ರಿಂದ 27 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಮತ್ತು ಜುಲೈ 28 ರಂದು ಉತ್ತರ ಕರ್ನಾಟಕದ ಕರಾವಳಿಯಲ್ಲಿ 40-45 ಕಿಮೀ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿಯ ವೇಗವು ಚಾಲ್ತಿಯಲ್ಲಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
Karnataka Weather : Rains gave a little break in the state : Children turned to school